Site icon Kundapra.com ಕುಂದಾಪ್ರ ಡಾಟ್ ಕಾಂ

ದಸರಾ ಕಲಾ ತರಬೇತಿ ಶಿಬಿರದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ದಸರಾ ಕಲಾ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಗುಜ್ಜಾಡಿಯ ಉದ್ಯಮಿ ಗಣಪತಿ ಮೇಸ್ತ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ.ಗುಜ್ಜಾಡಿ, ಶಾಲಾ ಮುಖ್ಯೋಪಾಧ್ಯಾಯ ಆನಂದ ಜಿ. ಶುಭಾಶಂಸನೆಗೈದರು. ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ ಮೇಸ್ತ, ತುಂಗಾ ಪೂಜಾರ‍್ತಿ, ಸಂಪನ್ಮೂಲ ವ್ಯಕ್ತಿ ಸಿ.ಎನ್.ಬಿಲ್ಲವ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಎ.ಆರ್.ವಲಿವುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

ಪೂರ್ವ ಪ್ರಾಥಮಿಕ ಶಾಲೆ ಶಿಕ್ಷಕಿ ಶಯನಾ ಪ್ರಾರ್ಥನೆ ಹಾಡಿದರು. ಜೊತೆ ಕಾರ್ಯದರ್ಶಿ ರಾಘವೇಂದ್ರ ಡಿ. ಸ್ವಾಗತಿಸಿದರು. ಶ್ರೀಧರ ಮೇಸ್ತ ಕಾರ್ಯಕ್ರಮ ನಿರ್ವಹಿಸಿದರು.

Exit mobile version