Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಯುವತಿಗೆ ಅತ್ಯಾಚಾರವೆಸಗಿ ಜೀವ ಬೆದರಿಕೆ – ಆರೋಪಿಯ ಬಂಧನ

ಬೈಂದೂರು: ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ಯುವತಿಯೋರ್ವಳನ್ನು ಅತ್ಯಾಚಾರಗೈದು, ಬಳಿಕ ಜೀವ ಬೆದರಿಕೆಯೊಡ್ಡಿದ ಘಟನೆ ಕುಂದಾಪುರ ತಾಲೂಕಿನ ಬೈಂದೂರು ಸಮೀಪದ ಹೇರೂರು ಗ್ರಾ.ಪಂ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಯುವತಿ ಬೈಂದೂರು ರಾಣೆಯಲ್ಲಿ ನೀಡಿದ್ದು, ದೂರಿನನ್ವಯ ಸುರೇಶ್ ನಾಯ್ಕ್ (36) ಎಂಬುವವನನ್ನು ಬಂಧಿಸಲಾಗಿದೆ.

ಘಟನೆಯ ವಿವರ:

ಹೇರೂರು ಗ್ರಾಮದ ಮಡ್ಲಕೇರಿ ನಿವಾಸಿಯಾದ ವಿವಾಹಿತ ಸುರೇಶ್ ನಾಯ್ಕ್ ಎಂಬುವವನು ಅದೇ ಗ್ರಾಮದ ಯುವತಿಯೋರ್ವಳನ್ನು ಕಳೆದ ಮೂರು ತಿಂಗಳ ಹಿಂದೆ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಅತ್ಯಾಚಾರವೆಸವೆಸಗಿದ್ದ. ಮಾತ್ರವಿಲ್ಲದೇ ಈ ವಿಷಯವನ್ನು ಯಾರಿಗೂ ತಿಳಿಸದಂತೆ ಆಕೆಗೆ ಜೀವ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. (ಕುಂದಾಪ್ರ ಡಾಟ್ ಕಾಂ ವರದಿ)

ಘಟನೆ ನಡೆದು ಕೆಲವು ದಿನಗಳ ಬಳಿಕ ಯುವತಿಗೆ ಮದುವೆ ನಿಶ್ಚಿತಾರ್ಥವಾಗಿರುವುದನ್ನು ತಿಳಿದ ಸುರೇಶ್ ನಾಯ್ಕ್ ಆ ಯುವತಿಯನ್ನು ಮದುವೆಯಾಗಲಿರುವ ಹುಡುಗನಿಗೆ ಕರೆಮಾಡಿ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿರುವುದಾಗಿ ತಿಳಿಸಿದ್ದಾರೆ. ಮದುವೆಯಾಗಬೇಕಿದ್ದ ಹುಡುಗನಿಗೆ ವಿಚಾರ ತಿಳಿದ ಬಳಿಕ ನಿಶ್ಚಿತಾರ್ಥ ಮುರಿದು ಬಿದ್ದಿತ್ತು. ಈ ಮೂಲಕ ಅತ್ಯಾಚಾರ ಪ್ರಕರಣವೂ ಬೆಳಕಿಗೆ ಬಂದಿತ್ತು. (ಕುಂದಾಪ್ರ ಡಾಟ್ ಕಾಂ ವರದಿ)

ಇದೀಗ ಸಂತ್ರಸ್ಥ ಯುವತಿ ದೂರು ನೀಡಿದ್ದರಿಂದ, ಪ್ರಕರಣ ದಾಖಲಿಸಿಕೊಂಡ ಬೈಂದೂರು ಪೊಲೀಸರು ಅರೋಪಿಯನ್ನು ಬಂಧಿಸಿ ನ್ಯಾಯಂಗ ಬಂಧನಕ್ಕೊಳಪಡಿಸಿದ್ದಾರೆ.

Exit mobile version