ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಪಶುಪಾಲನಾ ಇಲಾಖೆ ಹಾಗೂ ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಉಚಿತವಾಗಿ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ತ್ರಾಸಿ ಗ್ರಾಮ ಪಂಚಾಯತ್ ವಠಾರದಲ್ಲಿ ಶುಕ್ರವಾರ ನಡೆಯಿತು.
ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದೇವಾಡಿಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಶು ವೈದ್ಯಾಧಿಕಾರಿ ಡಾ.ಅರುಣ್ ಕೆ.ಪಿ. ಹಾಗೂ ಸಿಬ್ಬಂದಿಗಳು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡಿದರು. ಗ್ರಾಮಸ್ಥರು ತಮ್ಮ ಸಾಕು ನಾಯಿಗಳಿಗೆ ಲಸಿಕೆ ಹಾಕಿಸಿ ಸಹಕರಿಸಿದರು.
ಲೆಕ್ಕ ಸಹಾಯಕ ಶಿವಾನಂದ, ಸದಸ್ಯರಾದ ರೆನ್ಸಮ್ ಪಿರೇರಾ, ಮಿಥುನ್ ದೇವಾಡಿಗ, ವಿಜಯ ಪೂಜಾರಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

