Site icon Kundapra.com ಕುಂದಾಪ್ರ ಡಾಟ್ ಕಾಂ

ಜನತಾ ಪಿಯು ಕಾಲೇಜು: ‘ವ್ಯಕ್ತಿತ್ವ ವಿಕಸನ ಮತ್ತು ಮಾನವೀಯ ಮೌಲ್ಯಗಳು’ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಮಾನವೀಯ ಮೌಲ್ಯಗಳು’ ಎಂಬ ವಿಷಯದ ಕುರಿತು ಕಾರ್ಯಾಗಾರ ನಡೆಯಿತು.

ಸಿದ್ಧಾಪುರ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ರಮಾನಂದ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ವ್ಯಕ್ತಿತ್ವ ವಿಕಸನ ಹಾಗೂ ಜೀವನ ಮೌಲ್ಯಗಳಿಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾಗಿ ಮಾತನಾಡಿದರು.

ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿರುವ ಮಂಜು ಕಾಳಾವರರವರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಸ್ತು, ಸನ್ನಡತೆ, ಸಂಸ್ಕಾರ, ಮಾವೀಯತೆಯ ಗುಣಗಳನ್ನು ಅಳವಡಿಸಿಕೊಂಡು ಸತ್ಪ್ರಜೆಯಾಗಿ ಬಾಳುವಂತೆ ಕರೆ ನೀಡಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ,ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾಗಿರುವ ಉದಯ್ ನಾಯ್ಕ್ ರವರು ಅತಿಥಿಗಳನ್ನು ಪರಿಚಯಿಸಿ, ವಿದ್ಯಾರ್ಥಿನಿಯರಾದ ಲಾವಣ್ಯ ಸ್ವಾಗತಿಸಿ, ನಿಖಿತಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಶ್ರೀಶ ವಂದಿಸಿದರು.

Exit mobile version