Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು: ಬೈಂದೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗೆ ನೆರವು ನೀಡಲು ಕೇಂದ್ರ ಸಚಿವರಿಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಭಾರತದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ. ಮುರಳಿಧರನ್ ಅವರು ಭಾನುವಾರ ಕೊಲ್ಲೂರಿಗೆ ಭೇಟಿ ನೀಡಿದ ಸಂದರ್ಭ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಸಚಿವರನ್ನು ಭೇಟಿ ಮಾಡಿ ಬೈಂದೂರು ವಿಧಾನಸಭಾ ಕ್ಷೇತ್ರದ ರೈಲ್ವೇ, ಏರ್ ಸ್ಟ್ರಿಪ್ ಹಾಗೂ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸೂಕ್ತ ನೆರವು ನೀಡುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿ, ಕೊಲ್ಲೂರು ಗ್ರಾ. ಪಂ ಅಧ್ಯಕ್ಷರಾದ ಸಂತೋಷ್ ಭಟ್, ರೈಲ್ವೇ ಬೋರ್ಡ್ ಮಾಜಿ ನಿರ್ದೇಶಕರಾದ ವೆಂಕಟೇಶ್ ಕಿಣಿ, ಬೈಂದೂರು ವಕೀಲರ ಸಂಘದ ಅಧ್ಯಕ್ಷರಾದ ಮೊಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Exit mobile version