Kundapra.com ಕುಂದಾಪ್ರ ಡಾಟ್ ಕಾಂ

ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರ ಕಾರಿಗೆ ಬೈಕ್ ಡಿಕ್ಕಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.31:
ತಾಲೂಕಿನ ಜಾಲಾಡಿ ಸಮೀಪದ ಎನ್.ಹೆಚ್- 66ರಲ್ಲಿ ಕಾರು ಹಾಗೂ ಬೈಕ್ ನಡುವೆ ಸೋಮವಾರ ಅಪಘಾತ ಸಂಭವಿಸಿದೆ. ಉದ್ಯಮಿ, ಸಮಾಜ ಸೇವಕ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಬೈಕ್ ಸವಾರನಿಗೆ ಗಾಯಗಳಾಗಿದೆ.

ಕುಂದಾಪುರ ಕಡೆಯಿಂದ ಬರುತ್ತಿದ್ದ ಕಾರಿಗೆ ಜಾಲಾಡಿ ಸಮೀಪ ವಿರುದ್ದ ದಿಕ್ಕಿನಿಂದ ಏಕಾಏಕಿ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಬೈಕ್ ಸವಾರನ ಮುಖಭಾಗಕ್ಕೆ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಏರ್ ಬಲೂನ್ಸ್ ತೆರೆದುಕೊಂಡಿತ್ತು. ಕಾರಿನಲ್ಲಿದ್ದ ಕೃಷ್ಣಮೂರ್ತಿ ಮಂಜ, ಅವರ ಪತ್ನಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಾಸಲಾಗಿದೆ.

ಕೃಷ್ಣಮೂರ್ತಿ ಮಂಜ ಅವರು ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದರು. ಅವರಿಗೆ ನಿನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿತ್ತು.

Exit mobile version