Site icon Kundapra.com ಕುಂದಾಪ್ರ ಡಾಟ್ ಕಾಂ

ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಪೊಲಿಸರನ್ನು ತಳ್ಳಿ ಪರಾರಿಯಾಗಿದ್ದ ಕಳವು ಪ್ರಕರಣದ ಆರೋಪಿ ಮೊಹಮ್ಮದ್ ರಾಹೀಕ್ (22) ಎಂಬಾತನನ್ನು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.

ಬಿಜಾಡಿಯ ಮೊಬೈಲ್ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ರಾಹೀಕ್ ಎಂಬುವವನನ್ನು ಕುಂದಾಪುರ ನಗರ ಠಾಣೆ ಪೊಲೀಸರು ಬಂಧಿಸಿ ಅ.19ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಹಾಗೂ ಸಿಬ್ಬಂದಿ ಬಸನಗೌಡ ಅವರು ಹಿರಿಯಡ್ಕದ ಕಾರಾಗೃಹಕ್ಕೆ ಕರೆಯ್ಯುತ್ತಿದ್ದರು. ರಾತ್ರಿ 8.25ಕ್ಕೆ ಹಿರಿಯಡ್ಕ ಅಂಜಾರು ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದ ಮುಖ್ಯ ದ್ವಾರದ ಬಳಿ ವಾಹನ ನಿಲ್ಲಿಸಿ ಆರೋಪಿಯನ್ನು ಇಳಿಸುತ್ತಿದ್ದಂತೆ ಪೊಲೀಸರನ್ನು ತಳ್ಳಿ ಕಾಡಿನ ಕಡೆ ಓಡಿ ಹೋಗಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಕುಂದಾಪುರ ಠಾಣೆ ಹೆಡ್ ಕಾನ್ಸ್ಟೇಬಲ್ ಮಂಜುನಾಥ ಎಚ್. ಎನ್ನುವರು ಹಿರಿಯಡಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆರೋಪಿ ಮೊಹಮ್ಮದ್ ರಾಹೀಕ್ ಎಂಬಾತನ ಪತ್ತೆಗಾಗಿ ಪೊಲೀಸರ ತಂಡ ರಚಿಸಿ ತನಿಕೆ ನಡೆಸಿದ್ದು ಅಂತಿಮವಾಗಿ ಮುಂಬೈನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Exit mobile version