ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ನ.7: ಜನಸಂಕಲ್ಪ ಯಾತ್ರೆಯಿಂದ ಕಾರ್ಯಕರ್ತರಲ್ಲಿ ಹುರುಪು ಮೂಡಿದ್ದು ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಇದು ಮುಂದುವರಿಯಲಿದೆ ಎಂದು ಸಿಎಂ ಬಸವರಾಜ ಎಸ್. ಬೊಮ್ಮಾಯಿ ಅವರು ಹೇಳಿದರು.
ಅವರು ಕಾಪು ಹಾಗೂ ಬೈಂದೂರು ಕ್ಷೇತ್ರದಲ್ಲಿ ಆಯೋಜಿಸಲಾದ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ಉಡುಪಿ ಹೆಲಿಪ್ಯಾಡಿಗೆ ಆಗಮಿಸಿದ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಆದರೆ ಅದರ ನಾಯಕರು ನಮ್ಮ ಮೇಲೆ ಆರೋಪ ಮಾಡುವುದರಲ್ಲಿ ಮುಳುಗಿದ್ದಾರೆ. ಸಿದ್ಧರಾಮಯ್ಯನವರು ಹೇಳಿದ್ದು ಯಾವುದೂ ನಿಜವಾಗಿಲ್ಲ. ಹಾಗಾಗಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಈ ವೇಳೆ ಸಚಿವರುಗಳಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಗೋವಿಂದ ಕಾರಜೋಳ, ಜಿಲ್ಲಾಧಿಕಾರಿ ಕೂರ್ವರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.