ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ನ.07: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು.
ಈ ವೇಳೆ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಶಾಸಕ ಸುಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರುಗಳಾದ ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಕುಂಆರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:
► ಮೀನುಗಾರರು, ರೈತ ಕೂಲಿಕಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಣೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – https://kundapraa.com/?p=63074 .