Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಸಿಹಿತಿಂಡಿ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಅಂದಿನ ಕಷ್ಟಕಾಲದಲ್ಲಿ ಮದ್ರಾಸ್ ಟೀ ಸ್ಟಾಲ್ ಇಟ್ಟುಕೊಂಡು ಜೀವನ ನಡೆಸಿದ ಯು.ಶೇಷಗಿರಿ ಶ್ಯಾನುಭಾಗ್ ಅವರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಶಿಕ್ಷಣ ನೀಡಿ, ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಂತೆ ಮಾಡಿದ್ದರು. ಶೇಷಗಿರಿ ಶ್ಯಾನುಭಾಗ್ ಅವರ ಜನ್ಮ ಶತಾಬ್ದಿ ಅಂಗವಾಗಿ ಅವರ ಹೆಸರನ್ನು ಸ್ಮರಣೆ ಮಾಡಿಕೊಂಡು ಅವರ ಪುತ್ರ ಯು.ವಸಂತ ಶ್ಯಾನುಭಾಗ್ ಅವರು ಶಿಶು ಮಂದಿರದ ಮಕ್ಕಳಿಗೆ ಹಣ್ಣುಹಂಪಲು ಮತ್ತು ಸಿಹಿತಿಂಡಿಗಳನ್ನು ವಿತರಿಸಿರುವುದು ಸ್ತುತ್ಯಾರ್ಹವಾದುದು ಎಂದು ಗಂಗೊಳ್ಳಿ ಜಿಎಸ್ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್ ಹೇಳಿದರು.

ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಬುಧವಾರ ಯು. ಶೇಷಗಿರಿ ಶ್ಯಾನುಭಾಗ್ ಅವರ ಜನ್ಮ ಶತಾಬ್ದಿ ಅಂಗವಾಗಿ ಶಿಶು ಮಂದಿರದ ಮಕ್ಕಳಿಗೆ ಹಣ್ಣುಹಂಪಲು ಮತ್ತು ಸಿಹಿತಿಂಡಿಗಳನ್ನು ವಿತರಿಸಿ ಅವರು ಮಾತನಾಡಿದರು.

ಶಿಶು ಮಂದಿರದ ಅಧ್ಯಕ್ಷೆ ಸವಿತಾ ಯು.ದೇವಾಡಿಗ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಯು.ಶ್ರೀಕಾಂತ ಶೆಣೈ ಗಂಗೊಳ್ಳಿ ಶುಭ ಹಾರೈಸಿದರು. ಯು.ದಿವಾಕರ ಶ್ಯಾನುಭಾಗ್, ಯು.ಶಶಾಂತ ಶೆಣೈ, ಶಿಶು ಮಂದಿರದ ಸದಸ್ಯರಾದ ಬಿ.ಲಕ್ಷ್ಮೀಕಾಂತ ಮಡಿವಾಳ, ವಸಂತಿ ಎನ್.ಖಾರ್ವಿ, ಮಾತಾಜಿ ಭಾಗೀರಥಿ, ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.

ಶಿಶು ಮಂದಿರದ ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಶು ಮಂದಿರದ ಸದಸ್ಯ ಬಿ.ರಾಘವೇಂದ್ರ ಪೈ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version