Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ‘ನೆತ್ತರ ನೆರವು’ ಕಾರ್ಯಕ್ರಮ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ನೆತ್ತರ ನೆರವು ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದ ವರ್ಗೀಕರಣದ ಮಹತ್ವವನ್ನು ಮತ್ತು ರಕ್ತದ ಅನಿವಾರ್ಯತೆಯನ್ನು ವಿದ್ಯಾರ್ಥಿಗಳಿಗೆ ಹೇಳಿದರು.

ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಯುವ ರೆಡ್ ಕ್ರಾಸ್ ಸಂಯೋಜನಾಧಿಕಾರಿಯಾದ ಶ್ರೀ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳಲ್ಲಿ ಸೇವಾ ಮನೋಭಾವನೆ ಬಹುಮುಖ್ಯ ಪಾತ್ರ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸುಭದ್ರ ಸಮಾಜPÉÌ ಆರೋಗ್ಯಯುತ ಯುವಶಕ್ತಿ ಅವಶ್ಯಕ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹ ಸಂಯೋಜಕಿಯಾದ ದೀಪಾ ಪೂಜಾರಿ ಸ್ವಾಗತಿಸಿದರು. ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version