Kundapra.com ಕುಂದಾಪ್ರ ಡಾಟ್ ಕಾಂ

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್: ನಾಗೂರು ಶಾಖೆ ಗ್ರಾಹಕರ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಗ್ರಾಹಕರ ಮತ್ತು ಸದಸ್ಯರ ಸಹಕಾರದಿಂದ ಸಹಕಾರಿ ಸಂಘಗಳು ಅತ್ಯಂತ ಯಶಸ್ವಿಯಾಗಿ ಮುನ್ನೆಡೆಯುತ್ತಿವೆ. ಕೇವಲ ಆಡಳಿತ ಮಂಡಳಿಯಿಂದ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುವುದಲ್ಲ. ಸದಸ್ಯರು ಮತ್ತು ಗ್ರಾಹಕರ ಉತ್ತಮ ಸ್ಪಂದನೆ ಬಹಳ ಮುಖ್ಯವಾಗಿದೆ. ಜನರಿಗೆ ಉತ್ತಮ ಸೇವೆ ಸಿಗಲು ಸಿಬ್ಬಂದಿಗಳ ಪ್ರಾಮಾಣಿಕ ದುಡಿಮೆ ಕಾರಣವಾಗುತ್ತದೆ ಎಂದು ಶ್ರೀರಾಮ ಸೌಹಾರ್ದ ಕೋ ಅಪರೇಟೆವ್ ಸೊಸೈಟಿ ಬೈಂದೂರು ಇದರ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಹೇಳಿದರು.

ಅವರು ಗುರುವಾರ ನಾಗೂರಿನಲ್ಲಿ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಇದರ ನಾಗೂರು ಶಾಖೆಯ ಗ್ರಾಹಕರ ಸಮಾವೇಶ ಮತ್ತು ಪೊಲೀಸ್ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶ್ರೀರಾಮ ಸೌಹಾರ್ದ ಸಹಕಾರಿ ಸಂಘವು ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಪಡೆದ ಬಗ್ಗೆ ಎಲ್ಲ ಗ್ರಾಹಕರನ್ನು ಅಭಿನಂದಿಸಿದರು. ಎಲ್ಲರ ಸಹಕಾರದಿಂದ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬೈಂದೂರು ಆರಕ್ಷಕ ಠಾಣೆಯ ತನಿಖಾ ವಿಭಾಗದ ಉಪ ನಿರೀಕ್ಷಕರಾದ ಮಹೇಶ್ ಕಂಬಿ ಇಲಾಖಾ ಮಾಹಿತಿ ನೀಡಿ ಸಮಾಜದಲ್ಲಿ ಶಾಂತಿಯುತವಾಗಿ ನಡೆಯಲು ಎಲ್ಲರ ಸಹಕಾರ ಬೇಕು. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

ಸೊಸೈಟಿಯು ಪ್ರಕಟಿಸಿದ 2023 ಇಸವಿಯ ಕ್ಯಾಲೆಂಡರ್ರನ್ನು ಬಿಡುಗಡೆ ಗೊಳಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ, ನಿರ್ದೇಶಕರಾದ ಮಂಜು ಬಿಲ್ಲವ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ವಿನಾಯಕ ರಾವ್ ಮರವಂತೆ ಸ್ವಾಗತಿಸಿದರು. ಸಂಸ್ಥೆಯ ಶಾಖಾ ವ್ಯವಸ್ಥಾಪಕ ಪ್ರಶಾಂತ್ ವಂದಿಸಿದರು. ವಿವಿಧ ಶಾಖಾ ವ್ಯವಸ್ಥಾಪಕರುಗಳಾದ ರಾಜೇಂದ್ರ ದೇವಾಡಿಗ, ರಾಘವೇಂದ್ರ ಪೂಜಾರಿ, ಶ್ರೀನಿವಾಸ್ ನಾವುಂದ ಸಹಕರಿಸಿದರು. ಈ ವೇಳೆ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Exit mobile version