ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಕ್ಷಿಣ ಕನ್ನಡ ಯುವ ವಕೀಲ ಕುಲದೀಪ್ ಶೆಟ್ಟಿ ಯವರ ಮೇಲೆ ಪುಂಜಾಲಕಟ್ಟೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆಯವರ ನೇತೃತ್ವದಲ್ಲಿ ವಕೀಲರ ಸಂಘದಿಂದ ಬುಧವಾರ ಬೆಳಿಗ್ಗೆ ಕುಂದಾಪುರ ವಕೀಲರ ಭವನದ ಮುಂಭಾಗದಲ್ಲಿ ದೌರ್ಜನ್ಯಕ್ಕೊಳಗಾದ ವಕೀಲರ ಪರವಾಗಿ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಲಾಯಿತು.
ಡಿ.3 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ತೀವ್ರವಾಗಿ ಖಂಡಿಸಿದರು. ನ್ಯಾಯಾಲಯದ ಆದೇಶದಂತೆ ಈ ಕೂಡಲೇ ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಬೀನಾ ಜೊಸೆಫ್, ಜತೆ ಕಾರ್ಯದರ್ಶಿ ರಿತೇಶ್ ಬಿ ಹಾಗೂ ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಹಾಗೂ ಹಿರಿಯ, ಕಿರಿಯ & ಮಹಿಳಾ ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

