ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಡಿ.21ರಿಂದ 27ರವರೆಗೆ ಆಳ್ವಾಸ್ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ನಿಮಿತ್ತ ಆಯೋಜಿಸಿರುವ ಕಲಾ ಮೇಳದ ಒಂದು ಭಾಗವಾದ ಶಿಲ್ಪಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮzಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿ?ನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಅಂತರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಜಾಂಬೂರಿ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ, ಜಾಂಬೂರಿಯಲ್ಲಿ ದೇಶದ ಅನೇಕ ಸಂಸ್ಕೃತಿಗಳನ್ನು ಜನರಿಗೆ ಪರಿಚಯಿಸುವ ಸಲುವಾಗಿ ಕೃಷಿಮೇಳ, ವಿಜ್ಞಾನ ಮೇಳ, ಆಹಾರ ಮೇಳ ಮುಂತಾದ ಅನೇಕ ಮೇಳಗಳನ್ನು ಹಮ್ಮಿಕೊಳ್ಳಲಾಗಿದೆ. ಕಲೆಯ ಕುರಿತಾದ ಪ್ರಜ್ಞೆಯನ್ನು ಜನರಿಗೆ ಬಿತ್ತರಿಸುವ ಸಲುವಾಗಿ ಕಲಾಮೇಳವನ್ನು ಆಯೋಜಿಸಲಾಗಿದೆ. ಮಕ್ಕಳು ಕಲೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದಾಗ ಅವರ ಮನೋ ವಿಕಸನದ ಜತೆಗೆ ಚಿಂತನೆಯಲ್ಲಿ ವ್ಯಾಪಕ ಬದಲಾವಣೆಗಳನ್ನು ಕಾಣಬಹುದು. ಪ್ರತಿನಿತ್ಯ ಪಾಠ ಪ್ರವಚನಗಳಲ್ಲಿ ಮಗ್ನರಾಗಿರುವ ವಿದ್ಯಾರ್ಥಿಗಳಿಗೆ ಕಲಾವಿದರ ಕೈ ಚಳಕದಿಂದ ಮೂಡಿದ ವಿವಿಧ ಕಲಾಕೃತಿಗಳು ಮನಸ್ಸಿಗೆ ಮುದ ನೀಡುವುದರ ಜೊತೆಗೆ ಮಾಹಿತಿಯನ್ನೂ ನೀಡುತ್ತದೆ ಎಂದರು.
ಹಿರಿಯ ಕಲಾವಿದ ಎಮ್. ರಾಮಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಚಿತ್ರ ಕಲಾವಿದ ಹಾಗೂ ಫೈಬರ್ ಕ್ಲೇ ಮಾಡೆಲ್ ನಿಪುಣ ಪುರು?ತ್ತಮ ಅಡ್ವೆ, ಪ್ರಸಾದ್ ಆರ್ಟ್ ಗ್ಯಾಲರಿಯ ಸಂಸ್ಥಾಪಕ ಕೋಟಿ ಪ್ರಸಾದ್ ಆಳ್ವ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ ಸೋಮಯಾಜಿ ಸ್ವಾಗತಿಸಿ, ವಿದ್ಯಾರ್ಥಿನಿ ಅಯನಾ. ವಿ ರಮಣ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.