Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಸಂಘಟನೆ ಬಲಗೊಳಿಸಲು ಶ್ರಮವಹಿಸಿ: ರೋಝಿ ಜಾನ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಡಿ.20:
ಕರ್ನಾಟಕದ ಜನ ಬದಲಾವಣೆ ಬಯಸುತ್ತಿದ್ದಾರೆ. ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯುವ ಮನಸ್ಸಿನಲ್ಲಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂಘಟನೆಯನ್ನು ಬಲಗೊಳಿಸಿ ಸಜ್ಜಾಗಬೇಕಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ರೋಝಿ ಜಾನ್ ಹೇಳಿದರು.

ಅವರು ಇಲ್ಲಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷ ಸಂಘಟನೆ ಸಭೆಯಲ್ಲಿ ಅವರು ಮಾತನಾಡಿ ಕಾಂಗ್ರೆಸ್ ಪಕ್ಷದ ಎದುರು ಕಠಿಣ ಸವಾಲುಳಿದ್ದು ಎಲ್ಲವನ್ನೂ ಚುನಾವಣೆಯಲ್ಲಿಯಲ್ಲಿ ಗೆಲುವು ಸಾಧಿಸುವ ಹೊಣೆಗಾರಿಕೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಉಡುಪಿ ಜಿಲ್ಲಾ ಉಸ್ತುವಾರಿ ಆರ್. ಧವನಾರಾಯಣ ಮಾತನಾಡಿ ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಸನ್ನ ಕುಮಾರ್ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಕುಂದರ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ಸತೀಶ್ ಕಿಣಿ ಬೆಳ್ವೆ, ಬಿ. ಹಿರಿಯಣ್ಣ, ಸದಾನಂದ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಮುಸ್ತಾಕ್ ಅಹಮದ್ ಬೆಳ್ವೆ, ಬಾಲಕೃಷ್ಣ ಪೂಜಾರಿ, ವಿಕಾಸ ಹೆಗ್ಡೆ, ಮುರಳಿ ಶೆಟ್ಟಿ ಉಡುಪಿ, ಚುನಾವನೆಗೆ ಅರ್ಜಿ ಸಲ್ಲಿಸಿದ ದಿನೇಶ್ ಹೆಗ್ಡೆ ಎಂ., ಅಶೋಕ್ ಪೂಜಾರಿ ಬೀಜಾಡಿ, ಶ್ಯಾಮಲಾ ಭಂಡಾರಿ, ಕಿಶನ್ ಹೆಗ್ಡೆ ಕೆ., ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಸುನಿಲ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ, ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಸೌರಭ್ ಬಲ್ಲಾಳ್, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಫಾರೂಕ್ ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ ಕೊಡವೂರು ಪ್ರಸ್ತಾವಿಸಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಸ್ವಾಗತಿಸಿ, ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ನಿರ್ವಹಿಸಿದರು.

Exit mobile version