Kundapra.com ಕುಂದಾಪ್ರ ಡಾಟ್ ಕಾಂ

ಮೀನುಗಾರಿಕೆಗೆ ಬಾಕಿ ಉಳಿದ ಸೀಮೆಎಣ್ಣೆ ಶೀಘ್ರ ಬಿಡುಗಡೆಗೊಳಿಸಲು ಸಂಸದ ಬಿ.ವೈ. ರಾಘವೇಂದ್ರ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಡಿ.20:
ಕರ್ನಾಟಕ ಸರ್ಕಾರಕ್ಕೆ 12,195 ಕೆ.ಎಲ್ ನೈಜ ಹಂಚಿಕೆಯಲ್ಲಿ, ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆ.ಎಲ್ ಮಾತ್ರ ಮಂಜೂರಾಗಿದೆ. ಕರ್ನಾಟಕದ ಬಡ ಮೀನುಗಾರರಿಗೆ ಸಹಾಯ ಮಾಡಲು ಉಳಿದ 6,723 ಕೆಎಲ್ ಸಿಮೇಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಲು ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ.ರಾಘವೇಂದ್ರ ಅವರು ಸಂಸತ್ ಭವನದಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ವಿನಂತಿಸಿದರು.

ಇದೇ ಸಂದರ್ಭ ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 2,472 ಕೆ.ಎಲ್ ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 3,000 ಕೆ.ಎಲ್ ಸಬ್ಸಿಡಿ ರಹಿತ ಪಿಡಿಎಸ್ ಸೀಮೆಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಿದ್ದಕ್ಕಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದರು.

ಕೇಂದ್ರ ಸಚಿವರು, ಸಂಸದರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಅತೀ ಶೀಘ್ರದಲ್ಲಿ ಕರ್ನಾಟಕದ ಉಳಿದ ಕೋಟಾದ ಸೀಮೆಎಣ್ಣೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾಗಿ ಸಂಸದರ ಕಛೇರಿ ಪ್ರಕಟಣೆ ತಿಳಿಸಿದೆ.

Exit mobile version