ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಳಗಾವಿಯಲ್ಲಿ ಜರುಗುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಭಾಗಿಯಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮೀನುಗಾರರ ನಿಯೋಗದೊಂದಿಗೆ ಭೇಟಿ ಮಾಡಿ ಕರಾವಳಿ ಜಿಲ್ಲೆಗಳ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ನೆರವಾಗುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಗಂಗೊಳ್ಳಿ ನಾಡ ದೋಣಿ ವಲಯ ಸಂಘಟನೆಯ ಅಧ್ಯಕ್ಷರಾದ ಯಶವಂತ್ ಖಾರ್ವಿ, ಮೀನುಗಾರ ಮುಖಂಡರಾದ ಗೋಪಾಲ್ ಖಾರ್ವಿ, ಹರೀಶ್ ಖಾರ್ವಿ, ಗಣಪತಿ ಖಾರ್ವಿ, ಮೊಗವೀರ ಸಮುದಾಯದ ಪ್ರಮುಖರಾದ ಹರೀಶ್ ತೋಳಾರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದ ಪೂಜಾರಿ ಪಡುಕೋಣೆ, ಮಂಜುನಾಥ ಪೂಜಾರಿ ಮುಂತಾದವರಿದ್ದರು.