Kundapra.com ಕುಂದಾಪ್ರ ಡಾಟ್ ಕಾಂ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ತಾಲೂಕು ಇದರ ಸರ್ವ ಸದಸ್ಯರ ಮಹಾಸಭೆ ರತ್ತೂಭಾಯಿ ಜನತಾ ಪ್ರೌಢಶಾಲೆಯಲ್ಲಿ ಜರುಗಿತು. ಈ ವೇಳೆ ಪ್ರಸಕ್ತ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಶಿಕ್ಷಕರಾದ ಭಾಗಿರತಿ ಮೊಗೆರಾ, ಎಲಿಜಬೆತ್ ಸಿ ಕೆ, ರಾಮ ಶೆಟ್ಟಿ, ಗಣಪತಿ, ಕೆ. ಮಾಧವ, ಎಸ್ ವಿ ಭಟ್, ನಾರಾಯಣ ದೇವಾಡಿಗ, ವೆಂಕಟರಮಣ ಹೋಬಳಿದಾರ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕ ಸಂಘದ ಅಧ್ಯಕ್ಷರಾದ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ ಎಂಜಿ, ಉಡುಪಿ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ದಿನಕರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂಜೀವ ದೇವಾಡಿಗ ನಿಕಟ ಪೂರ್ವ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೇರುಗಾರ್, ಬ್ರಹ್ಮಾವರ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ನಾಗೇಶ ನಾಯಕ್, ರತ್ತೂಬಾಯಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಆನಂದ ಮುದ್ದೋಡಿ, ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಖಜಾಂಚಿ ಅಚ್ಚುತ ಬಿಲ್ಲವ ಉಪಸ್ಥಿತರಿದ್ದರು

Exit mobile version