Kundapra.com ಕುಂದಾಪ್ರ ಡಾಟ್ ಕಾಂ

ಸಂಘಟನಾ ಶಕ್ತಿಯಿಂದ ಸಮಸ್ಯೆ ಪರಿಹಾರ ಸುಲಭಸಾಧ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ. ಜಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಿ ಬೆಂಗಳೂರು ಬೈಂದೂರು ತಾಲೂಕು ಘಟಕ ಇದರ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂಜಿ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಉದ್ಘಾಟಿಸಿದರು.

ಬಳಿಕ ಅವರು ಮಾತನಾಡಿ, ಸಾಂಘಿಕ ಚಟುವಟಿಕೆಯಿಂದ ಸಮಸ್ಯೆಗಳ ಪರಿಹಾರ ಸುಲಭ ಸಾಧ್ಯ ಸಂಘಟನೆಯು ಉತ್ತಮ ಪತದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಮತ್ತು ಜಿಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ದಿನಕರ ಶೆಟ್ಟಿ, ಸಾಧಕ ಶಿಕ್ಷಕರನ್ನು ಸನ್ಮಾನಿಸಿ ಶಿಕ್ಷಕರನ್ನು ಗೌರವಿಸುವುದರ ಮೂಲಕ ಅವರ ಕಾರ್ಯಕ್ಕೆ ಉತ್ತೇಜಿಸಿದಂತಾಗುತ್ತದೆ ಸಂಘವು ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿರಲಿ ಎಂದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಖರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೇರುಗಾರ್, ಉಡುಪಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂಜೀವ ದೇವಾಡಿಗ, ಬ್ರಹ್ಮಾವರ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಶಾಂತ ಶೆಟ್ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ನಾಗೇಶ್ ನಾಯಕ್, ರತ್ತೂಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಶಿಕ್ಷಕ ಸಂಘದ ಪದಾಧಿಕಾರಿಗಳಾದ ಮಂಜುನಾಥ ದೇವಡಿಗ, ನಾಗರತ್ನ ಬಿ., ಮಲ್ಲಿಕಾ ಶೆಟ್ಟಿ, ನಾಗರತ್ನ ಎಸ್, ರಾಘವೇಂದ್ರ ದೇವಾಡಿಗ ಉಪಸ್ಥಿತರಿದ್ದರು

ಪ್ರಸಕ್ತ ಸಾಲಿನಲ್ಲಿ ನಿವೃತ್ತ ಶಿಕ್ಷಕರಿಗೆ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷರಾದ ಸುನಿಲ್ ಶೆಟ್ಟಿ ಸರ್ವರನ್ನು ಸ್ವಾಗತಿಸಿದರು. ಗಿರಿಜಾ ಮೊಗವೀರ ಮಾಹಿತಿ ಪತ್ರವನ್ನು ಓದಿದರು ಕೋಶಾಧಿಕಾರಿ ಅಚ್ಯುತ ಬಿಲ್ಲವ ಆಯವ್ಯಯ ಮಂಡಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ವರದಿ ವಾಚಿಸಿ ಸರ್ವರಿಗೂ ಧನ್ಯವಾದ ಸಲ್ಲಿಸಿದರು. ಸಂಘಟನಾ ಕಾರ್ಯದರ್ಶಿ ಸುಬ್ರಮಣ್ಯ ಜಿ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು

Exit mobile version