Kundapra.com ಕುಂದಾಪ್ರ ಡಾಟ್ ಕಾಂ

ಜ. 24 ರಂದು ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜ.21:
ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಲ್ಲಿ 110/11 ಕೆವಿ 10 ಎಮ್.ವಿ.ಎ ಪರಿವರ್ತಕ-1 ಹಾಗೂ ಪರಿವರ್ತಕ-2 ಕ್ಕೆ ಬಣ್ಣ ಬಳಿಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿAದ ಹೊರಡುವ 11ಕೆ.ವಿ ಶಂಕರನಾರಾಯಣ, ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ, ವಾರಾಹಿ ಮತ್ತು ಕೆ.ಎನ್.ಎನ್.ಎಲ್ ಹಾಲಾಡಿ, ಅಮಾಸೆಬೈಲು, ಕುಳುಂಜೆ, ಶಂಕರನಾರಾಯಣ, ಹಾಲಾಡಿ-26, ಮಚ್ಚಟ್ಟು, ರಟ್ಟಾಡಿ, ತೊಂಬಟ್ಟು, ಕೆಳಸುಂಕ, ಜಡ್ಡಿನಗದ್ದೆ, ಹಾಲಾಡಿ, ಬಿದ್ಕಲ್ಕಟ್ಟೆ, ಗಾವಳಿ, ಹಾಲಾಡಿ-28, ಮಡಾಮಕ್ಕಿ, ಹಾಲಾಡಿ-76, ಸಿದ್ದಾಪುರ, ಉಳ್ಳೂರು-74, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ-ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಬೈಲೂರು, ಕೊಂಡಳ್ಳಿ, ಬೆದ್ರಾಡಿ, ಕೋಣಿಹರ, ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗವಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ ಮತ್ತು ಗೋಳಿಯಂಗಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

33/11 ಕೆ.ವಿ ತಲ್ಲೂರು ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಾಗೂ 11 ಕೆ.ವಿ ಸಬ್ಲಾಡಿ ಫೀಡರ್ನ ಲಿಂಕ್ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11 ಕೆ.ವಿ ತಲ್ಲೂರು ಉಪಕೇಂದ್ರದಿಂದ ಹೊರಡುವ 11 ಕೆ.ವಿ ಹೆಮ್ಮಾಡಿ, ಗುಲ್ವಾಡಿ, ವಂಡ್ಸೆ, ನೇರಳಕಟ್ಟೆ, ಬಾಂಡ್ಯ, ಕೆಂಚನೂರು, ದೇವಲ್ಕುಂದ ಮತ್ತು ಸಬ್ಲಾಡಿ ಫೀಡರುಗಳ ವಂಡ್ಸೆ, ಚಿತ್ತೂರು, ಬೆಳ್ಳಾಲ, ಜಡ್ಕಲ್, ಆನಗಳ್ಳಿ, ಉಪ್ಪಿನಕುದ್ರು, ತಲ್ಲೂರು, ಇಡೂರು-ಕುಂಜ್ಞಾಡಿ, ಮುದೂರು, ಹೊಸೂರು, ಕರ್ಕುಂಜೆ, ಕಾವ್ರಾಡಿ, ಅಂಪಾರು, ಬೆಳ್ಲಾಲ, ಕೆರಾಡಿ, ಆಜ್ರಿ, ಕೊಡ್ಲಾಡಿ, ಹೇರಿಕುದ್ರು, ಗುಲ್ವಾಡಿ, ಬಾಂಡ್ಯ, ತಲ್ಲೂರು, ಉಪ್ಪಿನಕುದ್ರು, ಹಟ್ಟಿಯಂಗಡಿ, ಕನ್ಯಾನ, ಕೆಂಚನೂರು, ನೇರಳಕಟ್ಟೆ ಹೆಮ್ಮಾಡಿ, ಕಟ್ಬೆಲ್ತೂರು ಮತ್ತು ದೇವಲ್ಕುಂದ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಂಬAಧಪಟ್ಟ ಗ್ರಾಹಕರು ಮೆಸ್ಕಾಂನೊAದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆವಿ ಕೊಳಲಗಿರಿ ಫೀಡರ್ ಮಾರ್ಗದಲ್ಲಿ ಟ್ರೀ ಕಟ್ಟಿಂಗ್ ಕಾಮಗಾರಿ ಹಾಗೂ ಚೇರ್ಕಾಡಿ ಫೀಡರಿನಲ್ಲಿ ರಸ್ತೆ ಅಗಲೀಕರಣ ಪ್ರಯುಕ್ತ ಹೆಚ್.ಟಿ/ಎಲ್.ಟಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಗ್ಗೇಲ್ ಬೆಟ್ಟು, ಜಾತಬೆಟ್ಟು, ಹಾವಂಜೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110 ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿAದ ಪರಶುರಾಮ ಥೀಮ್ ಪಾರ್ಕ್ ನ ಕಾಮಗಾರಿ ಕಾರ್ಯವನ್ನು ಹಮ್ಮಿಕೊಂಡಿರುವುದರಿAದ ಸದರಿ 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿAದ ಹೊರಡುವ 11ಕೆವಿ ಬೈಲೂರು ಎಕ್ಸ್ ಪ್ರೆಸ್ ಫೀಡರ್ಗಳ ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಉಡುಪಿ ಶಾರದ ಕಲ್ಯಾಣ ಮಂಟಪ ರಸ್ತೆ ಅಗಲೀಕರಣ ಕಾಮಗಾರಿ ಪ್ರಯುಕ್ತ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11ಕೆವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿAದ ಹೊರಡುವ 11ಕೆವಿ ಉಡುಪಿ-2, ಉಡುಪಿ-3 ಮತ್ತು ಚಿಟ್ಪಾಡಿ ಫೀಡರಿನಲ್ಲಿ ಮಿಷನ್ ಕಂಪೌAಡ್, ಕೋರ್ಟ್ ಬ್ಯಾಕ್ ರೋಡ್, ಕೋರ್ಟ್ ರಸ್ತೆ, ಅಜ್ಜರಕಾಡು, ಕೊಳಂಬೆ, ಉಡುಪ ಕಂಪೌಂಡ್, ಬೈಲೂರು ಮಹಿಷಮರ್ದಿನಿ, ದುರ್ಗಾನಗರ, ಶಾರದಾ ಕಲ್ಯಾಣ ಮಂಟಪ, ಬೀಡಿನಗುಡ್ಡೆ, ಚಿಟ್ಪಾಡಿ, ಒಳಕಾಡು, ತೆಂಪೇಟೆ, ಕೆ.ಎಂ.ಮಾರ್ಗ, ಮಾರುತಿ ವಿಥೀಕಾ, ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಕನಕದಾಸ ರಸ್ತೆ, ಇಂದಿರಾನಗರ, ಕಸ್ತೂರ್ಬಾ ನಗರ, ಕುಕ್ಕಿಕಟ್ಟೆ, ಬೈಲೂರು, ಹನುಮಾನ್ ಗ್ಯಾರೇಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರರಿಂದ ಹೊರಡುವ 11ಕೆವಿ ಇಂದ್ರಾಳಿ ಮತ್ತು ರಾಯಲ್ ಎಂಬೆಸಿ ಫೀಡರ್ ಮಾರ್ಗದಲ್ಲಿ ಜಿ.ಓ.ಎಸ್ ನಿರ್ವಹಣೆ ಮತ್ತು ಮೆಂಟೆನೆನ್ಸ್ ಕಾಮಗಾರಿ, 11ಕೆವಿ ಮೂಡುಬೆಳ್ಳೆ ಫೀಡರ್ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಾಗೂ 110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿAದ ಹೊರಡುವ 11ಕೆವಿ ಪೆರ್ಡೂರು ಫೀಡರ್ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಹಯಗ್ರೀವ ನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ, ರಾಯಲ್ ಎಂಬೆಸಿ, ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Exit mobile version