Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನೂತನ ಸಹಾಯಕ ಆಯುಕ್ತರಾಗಿ ರಶ್ಮಿ ಎಸ್. ಆರ್ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ರಶ್ಮಿ ಎಸ್. ಆರ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಮೂಲತಃ ಮಂಗಳೂರಿನವರಾದ ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಬಳಿಕ 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದು, ಪ್ರಸ್ತುತ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕುಂದಾಪುರದ ಉವವಿಭಾಗಾಧಿಕಾರಿಯಾಗಿದ್ದ ಕೆ. ರಾಜು ಅವರು ಮಂಗಳೂರು ಉಪವಿಭಾಗಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.

Exit mobile version