Site icon Kundapra.com ಕುಂದಾಪ್ರ ಡಾಟ್ ಕಾಂ

ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ.

ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2023 ಪರೀಕ್ಷೆಯಲ್ಲಿ ಕ್ರಮವಾಗಿ ಸುಮಂತ್ 96 ಪರ್ಸಂಟೈಲ್ (99.12 ಪರ್ಸಂಟೈಲ್ ರಸಾಯನಶಾಸ್ತ್ರ), ಆಯುಷ್ ಜೆ.ಸಿ 95 ಪರ್ಸಂಟೈಲ್ ( 97.01 ಪರ್ಸಂಟೈಲ್ ಭೌತಶಾಸ್ತ್ರ), ಹರ್ಷಿತ್ ಖಾರ್ವಿ 88.17 ಪರ್ಸಂಟೈಲ್, ಓಂಕಾರ್ ಪ್ರಭು 85.5 ಪರ್ಸಂಟೈಲ್, ತನಿಷಾ 83.5 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version