Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಬಜೆಟ್ – 23: ಮೀನುಗಾರಿಕೆಗೆ ಉತ್ತೇಜನಕ್ಕೆ ವಿವಿಧ ಯೋಜನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು,ಫೆ 17
: 2023-24ನೇ ಸಾಲಿನ 3 ಲಕ್ಷ 7 ಸಾವಿರ ಕೋಟಿ ಗಾತ್ರದ ರಾಜ್ಯ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಮಂಡಿಸಲಾಗುತ್ತಿದೆ.

ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್‌ ಆಧಾರಿತ ಮೋಟಾ‌ರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಗಳನ್ನು ಮೀಸಲಿಡಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ ವರ್ಷಗಳ ಅವಧಿಗೆ 2 ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು.

ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ನೀಡುತ್ತಿರುವ ಡೀಸೆಲ್‌ನ ಮಿತಿಯನ್ನು ಸದ್ಯದ 1.5 ಲಕ್ಷ ಕಿಲೋ ಲೀಟರ್‌ಗಳಿಂದ 2 ಲಕ್ಷ ಹೆಚ್ಚಿಸಲಾಗುವುದು. ಇದರಿಂದ ಕಿಲೋ ದರದಲ್ಲಿ ಲೀಟರ್‌ಗಳವರೆಗೆ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳ ನೆರವಾಗಲಿದೆ.

ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಎಂಬ ಯೋಜನೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆ ಜತೆ ಸಮನ್ವಯಗೊಳಿಸಿ ಈ ಯೋಜನೆ ಜಾರಿಗೊಳಿಸಲಾಗಿದೆ. ಇದರಡಿ ಕೃತಕ ಬಂಡೆಸಾಲು ಸ್ಥಾಪಿಸಲು ಕ್ರಮ. ಉತ್ತಮ ತಳಿಯ ಬಲಿತ ಬಿತ್ತನೆ ಮೀನು ಮರಿಗಳ ದಾಸ್ತಾನು ಪ್ರೋತ್ಸಾಹಿಸಲು ರೂ. 20ಕೋಟಿ

ಮೀನುಗಾರಿಕೆ ಉತ್ತೇಜನಕ್ಕೆ ಬೈಂದೂರು ತಾಲೂಕಿನಲ್ಲಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

12175 ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆಗೆ ಕ್ರಮ

ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ, ಮತ್ಸ್ಯ ಸಿರಿ ಎಂಬ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ರೂಪಿಸಲಾಗಿದೆ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ.

ಸೀಗಡಿ ಮೀನುಗಳ ರಫ್ತು ಪ್ರೋತ್ಸಾಹಿಸಲು ಕೇಂದ್ರ ಆಯವ್ಯಯದಲ್ಲಿ ರಫ್ತು ಸುಂಕವನ್ನು ಕಡಿಮೆ ಮಾಡಲಾಗಿದೆ.

ಕರಾವಳಿ ಜಿಲ್ಲೆಯಲ್ಲಿ ಆರ್ಟಿಫಿಶೀಯಲ್ ರಿಫ್ ಸ್ಥಾಪನೆ (ಕೃತಕ ಬಂಡೆಗಳ ಮೂಲಕ ) ಮಾಡಲಾಗುವುದು ಎಂದು ಹೇಳಿದ್ದಾರೆ.

ರೂ.17ಕೋಟಿ ವೆಚ್ಚದಲ್ಲಿ ಯಾಂತ್ರೀಕೃತ ಬೋಟುಗಳಿಗೆ ಇಸ್ರೋ ಅಭಿವೃದ್ದಿಪಡಿಸಿದ ಜಿಪಿಎಸ್ ದೋಣಿಗಳಿಗೆ ಅಳವಡಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಮೀನುಗಾರರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿರುವ ನಮ್ಮ ಸರ್ಕಾರ ಕಳೆದ ವರ್ಷ ವಸತಿ ರಹಿತ ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಇದೀಗ ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಇದು 10,000 ವಸತಿರಹಿತ ಮೀನುಗಾರರಿಗೆ ಅನ್ವಯವಾಗುತ್ತದೆ.

Exit mobile version