Site icon Kundapra.com ಕುಂದಾಪ್ರ ಡಾಟ್ ಕಾಂ

ಫೆ.20ರಂದು ಬೈಂದೂರು ಕ್ಷೇತ್ರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ. ಬೃಹತ್ ಸಮಾವೇಶಕ್ಕೆ ಸಿದ್ಧತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಫೆ.20ರ ಮಧ್ಯಾಹ್ನ 2:30ಕ್ಕೆ ಮುಳ್ಳಿಕಟ್ಟೆಯ ನಗುಸಿಟಿಯಲ್ಲಿ ಜರುಗಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು.

ಬೈಂದೂರಿನಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಭೇಟಿ ಮಹತ್ವಪೂರ್ಣವಾಗಿದೆ. ಅವರು ಚುನಾವಣೆಗೆ ಮಾರ್ಗದರ್ಶನ ಹಾಗೂ ಹೊಸ ದಿಕ್ಸೂಚಿ ನೀಡಲಿದ್ದಾರೆ ಎಂದರು.

ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತರ ಸಮಾವೇಶಕ್ಕೆ ಇಪ್ಪತ್ತು ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಅದಕ್ಕಾಗಿ 200 ಬಸ್ ವ್ಯವಸ್ಥೆ ಸೇರಿದಂತೆ ಇನ್ನಿತರ ತಯಾರಿ ಮಾಡಲಾಗುತ್ತಿದೆ. ರಾಷ್ಟ್ರೀಯ ಅಧ್ಯಕ್ಷರು ಉಡುಪಿಯಲ್ಲಿ ಬೆಳಿಗ್ಗೆ ಬಿಜೆಪಿ ಬೂತ್ ಸಮಿತಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಕೊಡಪಾಡಿಗೆ ಆಗಮಿಸಲಿದ್ದಾರೆ. ಅಲ್ಲಿಂದ ಮುಳ್ಳಿಕಟ್ಟೆಗೆ ರಸ್ತೆ ಮಾರ್ಗದಲ್ಲಿ ಬರಲಿದ್ದಾರೆ. ಪೂರ್ವಭಾವಿಯಾಗಿ ವಿವಿಧ ಶಕ್ತಿ ಕೇಂದ್ರಗಳಿಂದ 3000 ಬೈಕ್ ಜಾಥಾ ನಡೆಯಲಿದೆ ಎಂದರು.

ಮಾಧ್ಯಮಗೋಷ್ಠಿಯಲ್ಲಿ ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ಬೆಸ್ಕೂರು, ಪ್ರಕಾಶ್ ಪೂಜಾರಿ ಜಿಡ್ಡು ಉಪಸ್ಥಿತರಿದ್ದರು.

Exit mobile version