ಕುಂದಾಪ್ರ ಡಾಟ್ ಕಾಂ ಸುದ್ದಿ.
ಬಹ್ಮಾವರ: ತಾಲ್ಲೂಕಿನ ಕೆಂಜೂರು ಗ್ರಾಮದ ಕಲ್ಲುಗುಡ್ಡೆಯ ದಿನಕರ ಕೆಂಜೂರು ಅವರ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಹಾಗೂ ಕುಲಪತಿಗಳು ಪ್ರೊ. ಪಿ.ಎಸ್. ಯಡಪಡಿತ್ತಾಯ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ನಾಲೇಜ್ ಮ್ಯಾನೇಜ್ಮೆಂಟ್ ಪಾಲಿಸೀಸ್ ಎಂಡ್ ಪ್ರಾಕ್ಟಿಸಸ್: ಎ ಸ್ಟಡಿ ವಿದ್ ರೆಪರೆನ್ಸ್ ಟು ಕಂಪ್ಯೂಟರ್ ಸ್ವಾಪ್ಟವೇರ್ ಎಂಡ್ ಸರ್ವಿಸಸ್ ಕಂಪೆನೀಸ್ ಇನ್ ಕರ್ನಾಟಕ” ಎಂಬ ವಿಷಯದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಡಾ. ದಿನಕರ ಕೆಂಜೂರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಕರ್ನಾಟಕ ರಾಜ್ಯದ ಅಂಚೀಕೃತ ಬುಡಕಟ್ಟು ಸಮುದಾಯವಾದ ಕೊರಗ ಸಮುದಾಯದಲ್ಲಿ ಡಾಕ್ಟರೇಟ್ ಪಡೆದ ಮೂರನೇಯವರಾಗಿದ್ದು ವಿಕಲಚೇತನ ವ್ಯಕ್ತಿಯಾಗಿರುತ್ತಾರೆ. ಅವರು ಸುಕ್ರ ಕೊರಗ ಕೆಂಜೂರು ಮತ್ತು ದಿ. ಶಾಂತ ಕೆಂಜೂರು ರವರ ಪುತ್ರರಾಗಿರುತ್ತಾರೆ.