Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ: ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ, ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬೈಂದೂರು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯೋಜನೆಯಲ್ಲಿ ಶೈಕ್ಷಣಿಕ ಕಾರ್ಯಗಾರ, ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮವು ಶುಕ್ರವಾರ ಸಾಧನಾ ಸಭಾಭವನ ಮರವಂತೆಯಲ್ಲಿ ಜರುಗಿತು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಉದ್ದೇಶ, ಶಿಕ್ಷಣದಲ್ಲಿ ದೈಹಿಕ ಶಿಕ್ಷಣದ ಪ್ರಾಮುಖ್ಯತೆ, ಏನೇ ಅಡೆ ತಡೆ ಇದ್ದರೂ ಕ್ರೀಡಾ ಪ್ರತಿಭೆಗಳನ್ನು ಹೊರತರುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರದ ಕುರಿತು ಮನಮುಟ್ಟುವಂತೆ ತಿಳಿಸಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಪ್ರೋತ್ಸಾಹ ನುಡಿಗಳನ್ನಾಡಿದರು.

ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. 2022-23ನೇ ಸಾಲಿನಲ್ಲಿ ಕ್ರೀಡೆಯಲ್ಲಿ ವಿಭಾಗ, ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆಗೈದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ನಗದು ಪುರಸ್ಕಾರದೊಂದಿಗೆ ಗೌರವಿಸಲಾಯಿತು.

ಮುಖ್ಯ ಅತಿಥಿಯಾಗಿ ಸಾಧನಾ ಸಂಸ್ಥೆಯ ಸ್ಥಾಪಕರು ಹಾಗೂ ನಿವೃತ್ತ ಉಪನ್ಯಾಸಕರಾಗಿರುವ ಎಸ್ ಜನಾರ್ದನ ಅವರು ವಿದ್ಯಾರ್ಥಿಗಳನ್ನು ಗೌರವಿಸಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಹತ್ವ,ಹಾಗೂ ಅವರ ನಾಯಕತ್ವದ ಅಗತ್ಯತೆ ಬಗ್ಗೆ ಪ್ರೋತ್ಸಾಹದಾಯಕ ಮಾತುಗಳನ್ನು ಆಡಿದರು.

ಮುಖ್ಯ ಅತಿಥಿ ಬೈಂದೂರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಖರ ಪೂಜಾರಿ ಅವರು ವಿದ್ಯಾರ್ಥಿಗಳನ್ನುವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಾಧಕ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿರುವ ಮಂಜುನಾಥ ಎಂ.ಜಿ, ಬೈಂದೂರು ವಲಯದ ಕ್ರೀಡಾಸಾಧಗೆ ಮೆಚ್ಚಿಗೆ ವ್ಯಕ್ತಪಡಿಸಿ, ಕ್ರೀಡಾ ಪ್ರತಿಭೆಗಳಿಗೆ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಿಗೆ ಪ್ರೋತ್ಸಾಹದಾಯಕ ಮಾತನಾಡಿದರು.

ಸಂಘದ ಗೌರವ ಅಧ್ಯಕ್ಷರಾಗಿರುವ ರಾಜು ಎಸ್ ಮಯ್ಯಾಡಿ ಇವರು ಪ್ರಾಸ್ತಾವಿಕದೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಬಾಡ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಇಲ್ಲಿಯ ಮುಖ್ಯೋಪಧ್ಯಾರಾದ ಸೀತಾರಾಮ, ಬೈಂದೂರು ವಲಯದ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು, ಸಾಧನೆ ಗೈದ ಕ್ರೀಡಾಪಟುಗಳು, ಪೋಷಕರು, ಶಿಕ್ಷಕರು ಹಾಜರಿದ್ದರು. ಸಂಘದ ಕಾರ್ಯದರ್ಶಿ ನಿತ್ಯಾನಂದ ವಂದಿಸಿದರು. ವೀರೇಂದ್ರ ಜೋಗಿ ಕಾರ್ಯಕ್ರಮ ನಿರೂಪಿಸಿದರು

Exit mobile version