Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಮನೆ ಭೇಟಿ ಕಾರ್ಯಕ್ರಮದಲ್ಲಿ ಮಾಜಿ ಮಂತ್ರಿ ಕೆ.ಎಸ್. ಈಶ್ವರಪ್ಪ ಭಾಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ಬೈಂದೂರು ಕ್ಷೇತ್ರದಲ್ಲಿ ನಡೆದ ವಿಜಯ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಬಾಳೆಹಿತ್ಲು ಮಲಿಯನಮನೆ ರಸ್ತೆಯ ಮನೆ ಭೇಟಿ ನೀಡಿ ಕರಪತ್ರ ನೀಡಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು.

ಈ ವೇಳೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಶೆಟ್ಟಿ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಪ್ರಭಾರಿ ಉದಯ ಕುಮಾರ ಶೆಟ್ಟಿ, ರಾಜ್ಯ ಸಂಚಾಲಕ ರಾಜೇಂದ್ರ, ಸಹ ಸಂಚಾಲಕ ದತ್ತಾತ್ರೇಯ, ಕಿಶೋರ ಕುಮಾರ, ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರ್, ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಅನಿತಾ ಶ್ರೀಧರ್, ರಾಜೇಶ್ ಕಾವೇರಿ, ಸದಾನಂದ ಉಪ್ಪಿನಕುದ್ರು, ಸ್ಥಳೀಯರಾದ ರಾಜಶೇಖರ ದೇವಾಡಿಗ, ಚಂದ್ರಶೇಖರ ದೇವಾಡಿಗ, ದುರ್ಗ ದೇವಾಡಿಗ, ಉಮೇಶ ದೇವಾಡಿಗ, ಮಂಜುನಾಥ ಗಾಣಿಗ, ಕೆ. ವೆಂಕಟೇಶ್ ಕಿಣಿ, ರಾಜೇಶ ಐತಾಳ್ ಮೊದಲಾದವರು ಇದ್ದರು.

Exit mobile version