Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಲಾರಿ ಡಿಕ್ಕಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಸಂತೆ ಮಾರ್ಕೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಬಸ್ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪ್ಪೋದಿಂದ ಹೊರಟು ಬಸ್ ನಿಲ್ದಾಣಕ್ಕೆ ತೆರಳುವ ವೇಳೆ ಡಿವೈಡರ್ನಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಬೈಂದೂರಿನತ್ತ ಸಾಗುತ್ತಿದ್ದ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು ಬಸ್ ಚಾಲಕ ಭಾಸ್ಕರ್ ಎನ್. ನಾಯ್ಕ ಗಾಯಗೊಂಡಿದ್ದಾರೆ.

ನಿರ್ಲಕ್ಷ್ಯ ಹಾಗೂ ಅತಿ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.

ಕುಂದಾಪುರ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಘಟನೆಯಿಂದಾಗಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥವಾಯಿತು. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version