Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಟಿಎಪಿಸಿಎಂಎಸ್‌ನ ರೈತರ ತರಕಾರಿ ಮಾರುಕಟ್ಟೆ ಪ್ರಾಂಗಣ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರೈತರು ಬೆಳೆದ ತರಕಾರಿಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಟಿಎಪಿಸಿಎಂಎಸ್ ನಿರ್ಮಿಸಿದ ಮಾರುಕಟ್ಟೆ ಬೆಳೆಯುತ್ತಿರುವ ಕುಂದಾಪುರ ಪಟ್ಟಣಕ್ಕೊಂದು ಕೊಡುಗೆಯಾಗಿದೆ ಎಂದು ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಹೇಳಿದರು.

ಅವರು ಇಲ್ಲಿನ ಸಂಗಮ್ ಬಳಿ ಸೋಮವಾರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ (ಟಿಎಪಿಸಿಎಂಎಸ್) ರೂ.14ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ರೈತರ ತರಕಾರಿ ಮಾರುಕಟ್ಟೆ ಪ್ರಾಂಗಣ ಉದ್ಘಾಟಿಸಿ ಮಾತನಾಡಿ ಸಾರ್ವಜನಿಕರು ನೂತನ ಮಾರುಕಟ್ಟೆಯ ಉಪಯೋಗ ಪಡೆದುಕೊಳ್ಳುವಂತಾಗಲಿ ಎಂದರು.

ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್‍ಕುಮಾರ ದೀಪ ಬೆಳಗಿಸಿ ಶುಭಹಾರೈಸಿದರು.

ಟಿಎಪಿಸಿಎಂಎಸ್ ಕುಂದಾಪುರದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಮಾತನಾಡಿ ಸಂಸ್ಥೆಯ ವಜ್ರಮಹೋತ್ಸವ ವರ್ಷಾಚರಣೆಯ ಈ ಹೊತ್ತಿನಲ್ಲಿ ಸ್ವಂತ ನಿವೇಶನದಲ್ಲಿ ರೈತ ಮಾರುಕಟ್ಟೆ ಸ್ಥಾಪಿಸಿದೆ. ರೈತರು ನೇರವಾಗಿ ಮಾರುಕಟ್ಟೆಗೆ ಆಗಮಿಸಿ ವಹಿವಾಟು ನಡೆಸಬಹುದು ಎಂದರು.

ಟಿಎಪಿಸಿಎಂಎಸ್ ಉಪಾಧ್ಯಕ್ಷ ಶರತ್‍ಕುಮಾರ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮೊಳಹಳ್ಳಿ ಮಹೇಶ್ ಹೆಗ್ಡೆ, ಎಸ್. ರಾಜು ಪೂಜಾರಿ, ಟಿಎಪಿಸಿಎಂಎಸ್ ನಿರ್ದೇಶಕರಾದ ಮಲ್ಯಾಡಿ ಮೋಹನದಾಸ ಶೆಟ್ಟಿ, ಕೆ. ಸುಧಾಕರ ಶೆಟ್ಟಿ ಬಾಂಡ್ಯ, ಆನಂದ ಬಿಲ್ಲವ ಉಪ್ಪಿನಕುದ್ರು, ಕೆ. ಭುಜಂಗ ಶೆಟ್ಟಿ ಕೆರಾಡಿ, ಮೋಹನ ಪೂಜಾರಿ ಉಪ್ಪುಂದ, ಪ್ರಭಾಕರ ಶೆಟ್ಟಿ ಜಡ್ಕಲ್, ರವಿ ಗಾಣಿಗ ಆಜ್ರಿ, ಎಚ್. ದೀನಪಾಲ ಶೆಟ್ಟಿ ಮೊಳಹಳ್ಳಿ, ಎಸ್. ಜಯರಾಮ ಶೆಟ್ಟಿ ಬೆಳ್ವೆ ಮೊದಲಾದವರು ಉಪಸ್ಥಿತರಿದ್ದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು. ಟಿಎಪಿಸಿಎಂಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ವಂದಿಸಿದರು.

Exit mobile version