Kundapra.com ಕುಂದಾಪ್ರ ಡಾಟ್ ಕಾಂ

ಪ್ಯಾನ್ – ಆಧಾರ್ ಲಿಂಕಿಂಗ್ ಗಡುವು ಜೂನ್ 30ಕ್ಕೆ ವಿಸ್ತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆ ಇದೀಗ ಜೂನ್ 30ರವರೆಗೆ ವಿಸ್ತರಿಸಿದೆ. ಗಡುವು ಅವಧಿಗೆ ಮೂರು ದಿನ ಇರುವಾಗ ಮತ್ತೆ ಅವಧಿ ವಿಸ್ತರಣೆಯಾಗಿದೆ.

1000 ರೂ. ಶುಲ್ಕದೊಂದಿಗೆ ಪಾನ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಮಾರ್ಚ್ 31ರ ಗಡುವು ನೀಡಲಾಗಿತ್ತು. ಜೋಡಣೆಗೆ ಕೊನೆಯ ದಿನ ಸಮೀಪಿಸುತ್ತಿದ್ದಂತೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಸೈಬರ್ ಸೆಂಟರ್ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಇದರಿಂದ ಸೈಬರ್ ಸೆಂಟರ್ಗಳಲ್ಲಿಯೂ ಸರ್ವರ್ ಡೌನ್ ಸಹಿತ ಹಲವು ಸಮಸ್ಯೆ ತಲೆದೋರಿದೆ.

ಇದೀಗ ಮತ್ತೆ ಗಡುವು ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಿಸಿರುವುದಾಗಿ ಆದಾಯ ತೆರಿಗೆ ಇಲಾಖೆ ಮಂಗಳವಾರ ಟ್ವೀಟ್ ಮಾಡಿದೆ.

Exit mobile version