ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾದ ಉಪನ್ಯಾಸಕ ಡಾ. ಎಂ. ಬಿ. ನಟರಾಜ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ. ಲಲಿತಾದೇವಿ ಉಪಸ್ಥಿತರಿದ್ದರು.
ಉಪನ್ಯಾಸಕಿ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕರ ಸಂಘದ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ ವಂದಿಸಿದರು.