ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣ ಶಿಬಿರದಲ್ಲಿ ಸಾಧ್ಯವಾಗುತ್ತದೆ ಎಂದು ರಂಗಕರ್ಮಿ ಡಾ. ಸದಾನಂದ ಬೈಂದೂರು ಹೇಳಿದರು.
ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಮತ್ತು ಜೆಸಿಐ ಬೈಂದೂರು ಸಿಟಿ ಇವರ ಆಶ್ರಯದಲ್ಲಿ ಸೆಂಟರ್ ಫಾರ್ ಅಪ್ಲೈಡ್ ಥಿಯೇಟರ್ ಸೈನ್ಸ್ ಮೈಸೂರು ಮತ್ತು ಚಿತ್ರದುರ್ಗ ಇವರ ತರಬೇತಿ ಸಂಪನ್ಮೂಲ ಸಹಕಾರದಲ್ಲಿ ಕಲೆಯೊಂದಿಗೆ ಕಲಿಕೆ ವಿಶೇಷ ಶಿಬಿರದ ಕಲೆ ಕಲಿಕೆ ಸಂವಾದದಲ್ಲಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ಯನ್ನು ಜೆಸಿಐ ಬೈಂದೂರು ಸಿಟಿ ಅಧ್ಯಕ್ಷರಾದ ನರೇಂದ್ರ ಶೇಟ್ ವಹಿಸಿದ್ದರು. ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ರಂಗಕರ್ಮಿ ನಾ ಶ್ರೀನಿವಾಸ್ , ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಸದಸ್ಯೆ ರಾಧಾ ಕೊಡಗು, ಬೈಂದೂರು ಸಿಟಿ ಜೆಸಿಐನ ಸ್ಥಾಪಕ ಅಧ್ಯಕ್ಷರಾದ ಮಣಿಕಂಠ, ಚಿತ್ರ ಕಲಾವಿದ ಮದನ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಶ್ರೀ ಜನಾರ್ಧನ ದೇವಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು ನಾಗರತ್ನ ಸ್ವಾಗತಿಸಿದರು. ಕಲಾವತಿ ಧನ್ಯವಾದ ಸಲ್ಲಿಸಿದರು. ಗಣಪತಿ ಹೋಬಳಿದಾರ್ ಕಾರ್ಯಕ್ರಮ ಸಂಯೋಜಿಸಿದ್ದರು

