Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ವಿಧಾನಸಭಾ ಕ್ಷೇತ್ರ ಚೆಕ್ ಪೋಸ್ಟ್‌ಗಳಿಗೆ ಚುನಾವಣಾಧಿಕಾರಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬೈಂದೂರು ವಿಧಾನಸಭಾ ಕ್ಷೇತ್ರದ ಗಡಿಭಾಗದಲ್ಲಿ ಒಟ್ಟು ಮೂರು ಚೆಕ್ ಪೋಸ್ಟ್ ಇದ್ದು, ಪೊಲೀಸ್ ಸಿಬ್ಬಂದಿಗಳು ಹಾಗೂ ಪ್ಯಾರಾ ಮಿಲಿಟರಿ ಸಿಬ್ಬಂದಿ 3 ಪಾಳಿಯಲ್ಲಿ ದಿನವಿಡಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬೈಂದೂರು ಚುನಾವಣಾಧಿಕಾರಿ ಗಂಗಣ್ಣನವರರ್ ರಾತ್ರಿ ವೇಳೆಯಲ್ಲಿ ಕೊಲ್ಲೂರು ದಳಿ ಹಾಗೂ ಶಿರೂರು ಚೆಕ್ ಪೊಸ್ಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿರೂರು ರಾಷ್ಟ್ರೀಯ ಹೆದ್ದಾರಿ 66, ಕೊಲ್ಲೂರು ದಳಿಯ ರಾಷ್ಟ್ರೀಯ ಹೆದ್ದಾರಿ 766ಸಿ ಹಾಗೂ ಹೊಸಂಗಡಿ ರಾಜ್ಯ ಹೆದ್ದಾರಿಯಲ್ಲಿ ಚೆಕ್ ಪೋಸ್ಟ್ ಇದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.

Exit mobile version