Kundapra.com ಕುಂದಾಪ್ರ ಡಾಟ್ ಕಾಂ

ಬಿಜೆಪಿ ತೊರೆಯೊಲ್ಲ. ಎರಡು ದಿನದಲ್ಲಿ ನನ್ನ ನಿರ್ಧಾರ ತಿಳಿಸುತ್ತೇನೆ – ಬೈಂದೂರು ಶಾಸಕ ಬಿಎಂಎಸ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಈ ಭಾರಿ ಮತ್ತೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದ ಬಗ್ಗೆ ಬೇಸರವಿದೆ. ಸ್ಪರ್ಧಿಸಬೇಡಿ ಎಂದು ಮುಂಚಿತವಾಗಿ ತಿಳಿಸದಿರುವುದಕ್ಕೂ ನೋವಿದೆ. ಸದ್ಯ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಬೈಂದೂರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವ ಬಗ್ಗೆ ಇನ್ನೆರಡು ದಿನಗಳಲ್ಲಿ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು.

ಅವರು ತಮ್ಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ದುಡುಕಿನ ನಿರ್ಧಾರಕ್ಕೆ ಬಾರದಂತೆ ಸಲಹೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮೊಂದಿಗೆ ಬರುವಂತೆ ಆಹ್ವಾನಿಸಿದ್ದಾರೆ ಆದರೆ ಬಿಜೆಪಿ ತೊರೆಯಲ್ಲ ಎಂದು ಸ್ಪಷ್ಟಪಡಿಸಿದ್ದೇನೆ. ಯಡಿಯೂರಪ್ಪ ಅವರು ಮುಂದೆ ಉತ್ತಮ ಅವಕಾಶ ಸಿಗಲಿದ್ದು, ದುಡುಕಿ ನಿರ್ಧಾರ ಮಾಡದಂತೆ ಸಲಹೆ ಮಾಡಿದ್ದಾರೆ. ಬೈಂದೂರು ಅಭ್ಯರ್ಥಿ ಬಗ್ಗೆ ಅಸಮಾಧಾನವಿಲ್ಲ ಎಂದು ಹೇಳಿದರು.

ತಾನು ಶಾಸಕನಾದ ಹೊಸತರಲ್ಲಿ ಕಾಂಗ್ರೆಸ್ ಜೆಡಿಎಸ್ ಸರ್ಕಾರವಿದ್ದು, ನಂತರ ಎರಡು ವರ್ಷ ಕರೋನಾ ಕಾಡಿದ್ದು, ಬಿಜೆಪಿ ಅಧಿಕಾರ ಹಿಡಿದ ನಂತರ ೩ ಸಾವಿರ ಕೋಟಿ ಅನುದಾನ ತರುವಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರ ಸಹಕಾರ ದೊಡ್ಡದಿದೆ. ಮನೆ ಮನೆಗೂ ಕುಡಿಯುವ ನೀರು ನೀಡುವ ಯೋಜನೆ ಮೂಲಕ ನನ್ನ ಹೆಸರು ಸ್ಥಿರಸ್ಥಾಯಿಯಾಗಲಿದ್ದು, ಐದು ವರ್ಷಗಳ ಕಾಲ ಕೆಲಸ ಮಾಡಿದ ತೃಪ್ತಿಯಿದೆ. ನನ್ನ ನಂಬಿ ಬೇರೆ ಬೇರೆ ಪಕ್ಷದಿಂದ ಬಂದ ಮುಖಂಡರ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಈ ವೇಳೆ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ದೇವಾಡಿಗ, ಮಾಜಿ ತಾಪಂ ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ, ಪ್ರಕಾಶ್ ಪೂಜಾರಿ ಜಡ್ಡು ಮುಂತಾದವರು ಇದ್ದರು.

Exit mobile version