ಬೈಂದೂರು: ಕ್ರೀಡೆಯ ಮೂಲಕ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಸಿಕ್ಕ ಅವಕಾಶವನ್ನು ಸದ್ಬಳಕ್ಕೆ ಮಾಡಿಕೊಂಡರೇ ಯಶಸ್ಸು ಸುಲಭವಾಗಿ ದೊರೆಯುತ್ತದೆ. ಕ್ರೀಡೆ ವ್ಯಕ್ತಿತ್ವನ್ನು ರೂಪಿಸುವುದರೊಂದಿಗೆ ಓದಿನಲ್ಲಿಯೂ ಆಸಕ್ತಿ ಮೂಡಿಸುತ್ತದೆಂದು ತಾ.ಪಂ ಸದಸ್ಯ ರಾಜು ಪೂಜಾರಿ ಹೇಳಿದರು
ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೈಂದೂರು ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ಜರುಗಿದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಡಶಾಲಾ ಬಾಲಕ ಬಾಲಕಿಯರ ಎರಡು ದಿನಗಳ ಕಬ್ಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾಡನಾಡಿದರು.
14 ವಯೋಮಿತಿಯ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಂಗಳೂರು, ದ್ವಿತೀಯ ಸ್ಥಾನವನ್ನು ಮಂಡ್ಯ ಪಡೆದುಕೊಂಡರೇ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಚಿಕ್ಕಮಂಗಳೂರು, ದ್ವಿತೀಯ ಸ್ಥಾನವನ್ನು ಮಂಡ್ಯ ಪಡೆದುಕೊಂಡಿತು. 17 ವಯೋಮಿತಿಯ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಂಗಳೂರು, ದ್ವಿತೀಯ ಸ್ಥಾನವನ್ನು ಚಿಕ್ಕಮಂಗಳೂರು ಪಡೆದುಕೊಂಡರೇ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಂಗಳೂರು, ದ್ವಿತೀಯ ಸ್ಥಾನವನ್ನು ಉಡುಪಿ ಪಡೆದುಕೊಂಡಿತು. (ಕುಂದಾಪ್ರ ಡಾಟ್ ಕಾಂ ವರದಿ)
ಯಡ್ತರೆ ಗ್ರಾ.ಪಂ. ಉಪಾಧ್ಯಕ್ಷೆ ಕಲಾವತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಉಡುಪಿ ಡಯಟ್ ಕಾಲೇಜಿನ ಪ್ರಾಂಶುಪಾಲ ಶೇಖರ್, ಕುಂದಾಪುರ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ ಎಸ್., ಬೈಂದೂರು ವಲಯ ದೈಹಿಕ ಶಿಕ್ಷಣಾಧಿಕಾರಿ ರಾಜು ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಕಿರಣ್ ಶೆಟ್ಟಿ, ರೋಟರಿ ಬೈಂದೂರು ಅಧ್ಯಕ್ಷ ರಘುರಾಮ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶಾನುಭೋಗ್ ಮೊದಲಾದವರು ಉಪಸ್ಥಿತರಿದ್ದರು.
ಪದವೀಧರ ಮುಖ್ಯೋಪಧ್ಯಾಯ ಜನಾರ್ಧನ ದೇವಾಡಿಗ ಸ್ವಾಗತಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.