Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಮುನ್ನ ಬಿಜೆಪಿ ಶಕ್ತಿ ಪ್ರದರ್ಶನ – ದೀಪಕ್‌ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಬಿಜೆಪಿ ಪಕ್ಷ ಸಂಘಟಿತ ಹೋರಾಟದ ಮೂಲಕ ನಮ್ಮ ಅಭ್ಯರ್ಥಿಯ ಗೆಲವಿಗೆ ಪಣ ತೊಟ್ಟಿದ್ದು, ಎ.20ರಂದು ನಡೆಯಲಿರುವ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೈಂದೂರು ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಎ.20ರ ಬೆಳಿಗ್ಗೆ 9:30ಕ್ಕೆ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ನಾಮಪತ್ರ ಸಲ್ಲಿಸುವ ಮೊದಲು ಕಾರ್ಯಕರ್ತರ ಸಭೆಯ ನಡೆಯಲಿದ್ದು, 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಬಳಿಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.

ಶಾಸಕ ಸುಕುಮಾರ ಶೆಟ್ಟಿ ಅವರು ಅಭ್ಯರ್ಥಿಯ ಜೊತೆಗೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಮಾತುಕತೆ ನಡೆಸಿದ್ದು ಯಾರೂ ಪಕ್ಷ ತೊರೆಯುವುದಿಲ್ಲ. ಬೈಂದೂರು ಮಂಡಲದ ಬಿಜೆಪಿ ಪ್ರಭಾರಿಯಾಗಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ನೇಮಿಸಲಾಗಿದ್ದು, ಸಂಘಟಿತರಾಗಿ ಪಕ್ಷದ ಗೆಲುವಿಗೆ ಶ್ರಮಿಸಲಿದ್ದೇವೆ ಎಂದರು.

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ, ಮಂಡಲದ ಬಿಜೆಪಿ ಪ್ರಭಾರಿಯಾಗಿ ಕ್ಯಾ.ಬ್ರಿಜೇಶ್ ಚೌಟ, ಉಪಾಧ್ಯಕ್ಷ ಶ್ರೀಗಣೇಶ್ ಉಪ್ಪುಂದ, ಜಗನ್ನಾಥ ಮೊಗವೀರ ಉಪಸ್ಥಿತರಿದ್ದರು.

Exit mobile version