ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಎ.18: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಇಂದು ಬೈಂದೂರಿನ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ಅವರು ನಾಮಪತ್ರ ಸ್ವೀಕರಿಸಿದರು.
ನಾಮಪತ್ರ ಸಲ್ಲಿಸಿ ಮಾತನಾಡಿದ ಕೆ. ಗೋಪಾಲ ಪೂಜಾರಿ ಅವರು ನನ್ನ ನಾಲ್ಕು ಭಾರಿಯ ಶಾಸಕತ್ವದ ಅವಧಿಯ್ಲಲಿ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಸಿರುವ ಅಭಿವೃದ್ಧಿ ಕಾಮಗಾರಿಗಳು ಮೆಚ್ಚಿ ಜನರು ಮತ್ತೆ ತನ್ನನ್ನು ಬೆಂಬಲಿಸಲಿದ್ದಾರೆಂಬ ವಿಶ್ವಾಸವಿದೆ. ಬಿಜೆಪಿಯ ಸುಳ್ಳು ಭರವಸೆಗಳಿಂದ ಜನರು ಬೇಸತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ವಾಸುದೇವ ಯಡಿಯಾಳ್, ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.