ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜನಸಾಮಾನ್ಯರ ನೋವು, ನಲಿವುಗಳನ್ನು ವಿಧಾನಸಭೆಯಲ್ಲಿ ಸಮರ್ಥವಾಗಿ ಮಂಡಿಸುವ ಚಾಕಚಕ್ಯತೆ ಹೊಂದಿರುವ, ರಾಷ್ಟ್ರೀಯತೆ ಮೈಗೂಡಿಸಿಕೊಂಡು ಕೆಲಸವನ್ನು ಮಾಡುತ್ತಿರುವ ಬೈಂದೂರು ಚೌಕಿದಾರ್ ಗುರುರಾಜ್ ಗಂಟಿಹೊಳೆಯವರ ವಿಜಯಕ್ಕೆ ಕಾರ್ಯಕರ್ತರು ಶಕ್ತಿಮಿರಿ ಕೆಲಸ ಮಾಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೈಂದೂರು ಹೊಸ ಬಸ್ ನಿಲ್ದಾಣದಲ್ಲಿ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ಯುವಜನರ ರಣೋತ್ಸವ ಕಂಡಾಗ ನಮ್ಮ ಅಭ್ಯರ್ಥಿ ಗಂಟಿಹೊಳೆ ಅವರು ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸುನಿಲ್ ಕುಮಾರ್ ಮಾತನಾಡಿ, ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ಕಾಲದಲ್ಲಿ ಬೈಂದೂರು ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆದಿದೆ ಅವರ ಕಾರ್ಯಗಳು ಮುಂದುವರಿಯಬೇಕಾದರೆ ಬಿಜೆಪಿ ಅಭ್ಯರ್ಥಿ ಶಾಸಕನಾಗ ಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ಕರಾವಳಿ ಜನರು ಸಂಕಷ್ಟ ಅನುಭವಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಕೇಳಿಕೊಂಡರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮತ್ತು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಕ್ಯಾ. ಬ್ರಜೇಶ್ ಚೌಟ, ಪ್ರಣಯ್ ಕುಮಾರ್ ಶೆಟ್ಟಿ, ಕೃಷ್ಣಪ್ರಸಾದ ಅಡಂತ್ಯಾಯ, ಬಿ.ಎಸ್. ಸುರೇಶ್ ಶೆಟ್ಟಿ, ಸುರೇಶ ಬಟವಾಡಿ, ಪ್ರಿಯದರ್ಶಿನಿ ಬೆಸ್ಕೂರು, ರೋಹಿತ್ ಕುಮಾರ್ ಶೆಟ್ಟಿ, ಶರತ್‌ಕುಮಾರ ಶೆಟ್ಟಿ ವಿವಿಧ ಮೋರ್ಚಾದ ಪದಾಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿದರು.
ಸಭೆಯ ಬಳಿಕ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಸಂಸದ ತೇಜಸ್ವಿ ಸೂರ್ಯ, ನಟಿ ಶೃತಿ ಹಾಗೂ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಜೊತೆಯಾಗಿ ನಾಮಪತ್ರ ಸಲ್ಲಿಸಿದರು.