Site icon Kundapra.com ಕುಂದಾಪ್ರ ಡಾಟ್ ಕಾಂ

ದ್ವಿತೀಯ ಪಿಯು ಫಲಿತಾಂಶ: ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜು ವಿದ್ಯಾರ್ಥಿಗಳು 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ.

ಕಾಲೇಜಿನ ವಾಣಿಜ್ಯ ವಿಭಾಗದ 46 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ 64 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Exit mobile version