Kundapra.com ಕುಂದಾಪ್ರ ಡಾಟ್ ಕಾಂ

ಸರಸ್ವತಿ ವಿದ್ಯಾಲಯ ಎನ್ನೆಸ್ಸೆಸ್ ಶಿಬಿರ ಉದ್ಘಾಟನೆ.

ಬೈಂದೂರು: ಎನ್.ಎಸ್.ಎಸ್ ಶಿಬಿರ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಲು ನಮ್ಮ ಜೀವನದಲ್ಲಿ ಸಿಗುವ ಒಂದು ಅತ್ಯುತ್ತಮ ಅವಕಾಶ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕಾಗಿದೆ.ಆ ಮೂಲಕ ಒಂದು ಉತ್ತಮ ಸಮಾಜವನ್ನು ಕಟ್ಟುವಲ್ಲಿ ನಾವೆಲ್ಲರೂ ಶ್ರಮಿಸಬೇಕು ಮತ್ತು ಅದರ ನಿರ್ಮಾಣವೇ ನಮ್ಮ ಗುರಿಯಾಗಬೇಕು ಎ೦ದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಅವರು ಅಭಿಪ್ರಾಯಪಟ್ಟರು.

ಅವರು ಬೈಂದೂರಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರಂಭಗೊಂಡ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ‘ರಾಷ್ಟ್ರೀಯ ಸೇವಾ ಯೋಜನಾ ಘಟಕದ ೨೦೧೫ ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ ಮಾತನಾಡಿ ಎನ್ನೆನ್ನೆಸ್ ಕೂಡಿ ಬಾಳುವುದನ್ನು ಕಲಿಸುತ್ತದೆ ಮತ್ತೂ ಪ್ರತಿಯೊಬ್ಬರಲ್ಲೂ ಅಡಗಿರುವ ವಿಶೇಷ ಪ್ರತಿಭೆಯನ್ನು ಹೊರತರಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್ ಅಧ್ಯಕ್ಷತೆ ವಹಿಸಿದ್ದರು. ಯಡ್ತರೆ ಪಂಚಾಯತ್ ಅಧ್ಯಕ್ಷ ನಾಗರಾಜ ಶೆಟ್ಟಿ, ಸರಕಾರಿ ಪದವಿ ಪೂರ್ವ ಕಾಲೇಜು. ಬೈಂದೂರಿನ ಪ್ರಾಂಶುಪಾಲ ಪಾಲಾಕ್ಷ, ಜಿ.ಎಸ್.ವಿ.ಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಕಾಶೀನಾಥ ಪೈ ಶುಭ ಹಾರೈಸಿದರು.

ಸ.ವಿ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ,ಹಿಂದಿ ಉಪನ್ಯಾಸಕ ನಾರಾಯಣ ನಾಯ್ಕ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು, ಸ.ವಿ.ಕಾಲೇಜಿನ ಕಛೇರಿ ಪ್ರಬಂಧಕ ಜಿ.ಸದಾಶಿವ ಗಾಣಿಗ ಸ್ವಾಗತಿಸಿದರು. ಉಪನ್ಯಾಸಕರಾದ ಕವಿತಾ ಎಮ್ ಸಿ, ವೆಂಕಟೇಶ ಮೂರ್ತಿ,ಸಿಂಡ್ರೆಲ್ಲಾ ಗೊನ್ಸಾಲ್ವಿಸ್ ನರೇಂದ್ರ ಎಸ್ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು. ಮಾಧುರಿ ಮೇಘನಾ ಮತ್ತು ಸುಶ್ಮಿತಾ ಎನ್ನೆಸ್ಸೆಸ್ ಗೀತೆ ಹಾಡಿದರು. ಸಂಪ್ರೀತಾ ನಿಶಾ ಮತ್ತು ಸುಪ್ರೀತಾ ಪ್ರಾರ್ಥಿಸಿದರು.ಅರ್ಥ ಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಕಾರ‍್ಯಕ್ರಮ ನಿರೂಪಿಸಿದರು. ಇಂಗ್ಲೀಷ್ ಉಪನ್ಯಾಸಕ ಥಾಮಸ್ ಪಿ.ಎ ವಂದಿಸಿದರು.

ವರದಿ: ನರೇಂದ್ರ ಎಸ್ ಗಂಗೊಳ್ಳಿ.

Exit mobile version