Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ 11 ರ‍್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
2022-2023ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ 11 ರ‍್ಯಾಂಕ್ಗಳನ್ನು ಪಡೆಯುವುದರೊಂದಿಗೆ ಅಭೂತ ಪೂರ್ವ ಸಾಧನೆ ಮೆರೆದ ಕುಂದಾಪುರದ ಏಕೈಕ ಕಾಲೇಜಾಗಿ ಹೊರಹೊಮ್ಮಿದೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ 141 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 96 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 44 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಬಾರಿಯ ವಿಜ್ಞಾನ ವಿಭಾಗದಲ್ಲಿ 238 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 135 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 102 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಭೌತಶಾಸ್ತ್ರ 03, ರಸಾಯನಶಾಸ್ತç 05, ಗಣಿತಶಾಸ್ತ್ರ 09, ಜೀವಶಾಸ್ತ್ರ 03, ಗಣಕ ವಿಜ್ಞಾನ 30, ಬೇಸಿಕ್ ಮ್ಯಾಥ್ಸ 03, ಲೆಕ್ಕಶಾಸ್ತ್ರ 11, ವ್ಯವಹಾರ ಅಧ್ಯಯನ 05, ಸಂಖ್ಯಾಶಾಸ್ತ್ರ 04, ಕನ್ನಡ 03, ಸಂಸ್ಕೃತ 12 ವಿಷಯವಾರು 100ಕ್ಕೆ 100 ಅಂಕಗಳನ್ನು ಪಡೆದಿರುತ್ತಾರೆ.

ರಾಜ್ಯ ಮಟ್ಟದಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version