Kundapra.com ಕುಂದಾಪ್ರ ಡಾಟ್ ಕಾಂ

ಗುರುರಾಜ ಗಂಟಿಹೊಳೆ ಪರ ರಘುಪತಿ ಭಟ್, ಯಶ್ಪಾಲ್ ಸುವರ್ಣ ರೋಡ್ ಶೋ, ಮತ ಯಾಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ಉಡುಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ ಅವರು ಉಪ್ಪುಂದದ ಅಳುವೆಕೋಡಿಯಿಂದ ಕರ್ಕಿಕಾಳಿಯವರೆಗೂ ಶನಿವಾರ ಸಂಜೆ ರೋಡ್ ಶೋ ನಡೆಸಿ, ಮತ ಯಾಚಿಸಿದರು.

ಈ ವೇಳೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಮಾತನಾಡಿ, ಗುರುರಾಜ ಗಂಟಿಹೊಳೆಯವರೊಂದಿಗೆ ಯುವ ಸಮೂಹವೇ ಇದೆ. ಅವರ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮೀಸಬೇಕು. ಮೀನುಗಾರರ ಸೀಮೆಎಣ್ಣೆ ಸಮಸ್ಯೆಗೆ ಕೇಂದ್ರ ಸರಕಾರ ಶಾಶ್ವತ ಪರಿಹಾರ ನೀಡಲಿದೆ. ಇದಕ್ಕಾಗಿ ರಾಜ್ಯದಲ್ಲೂ ಅಧಿಕಾರಕ್ಕೆ ಬರಬೇಕು. ಬೈಂದೂರಿನಲ್ಲೂ ಗುರುಅಣ್ಣ ಜಯ ಸಾಧಿಸಬೇಕು ಎಂದರು.

ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ, ಬಿಜೆಪಿ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗೋವಿಂದ ಬಾಬು ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಪಕ್ಷದ ಮುಖಂಡರು ಹಾಗೂ, 5 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ರೋಡ್ ಶೋ ಭಾಗವಹಿಸಿದ್ದರು.

Exit mobile version