Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರದಲ್ಲಿ ಬಿಜೆಪಿ ಭರ್ಜರಿ ರೋಡ್ ಶೋ – ಸಾವಿರಾರು ಕಾರ್ಯಕರ್ತರು ಭಾಗಿ

ಕುಂದಾಪ್ರ ಡಾಟ್ ಕಂ ಸುದ್ದಿ.
ಕುಂದಾಪುರ:
ಕುಂದಾಪುರ ಬಿಜೆಪಿ ಅಭ್ಯರ್ಥಿ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಪರವಾಗಿ ಶನಿವಾರ ಕುಂದಾಪುರ ನಗರದಲ್ಲಿ ಭರ್ಜರಿ ರೋಡ್ ಶೋ ನಡೆಯಿತು.

ಸಾವಿರಾರು ಕಾರ್ಯಕರ್ತರು ಬಿಜೆಪಿ ಹಾಗೂ ಕೇಸರಿ ಧ್ವಜ ಹಿಡಿದ ರೋಡ್ ಶೋನಲ್ಲಿ ಹೆಜ್ಜೆ ಹಾಕಿದರು. ಕುಂದಾಪುರ ನೆಹರು ಮೈದಾನದಿಂದ ಆರಂಭಗೊಂಡು ಹೊಸ ಬಸ್ ನಿಲ್ದಾಣದ ಮುಖಾಂತರ ತಿರುಗಿ ಮತ್ತೆ ಶಾಸ್ತ್ರೀ ವೃತ್ತದಲ್ಲಿ ಸಮಾಪನಗೊಂಡಿತು.

ಬಜರಂಗದಳ ನಿಶೇಧದ ವಿರುದ್ಧ ಸಂಘಟನೆಗಳ ವಿರೊಧದ ಕೂಗು ಮರೆವಣಿಗೆಯಲ್ಲಿ ಕೇಳಿಬಂತು.

ಕುಂದಾಪುರ ಶಾಸಕರ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಸೇರಿದಂತೆ ವಿವಿಧ ಪದಾಧಿಕಾರಿಗಳು ಈ ವೇಳೆ ಜೊತೆಗಿದ್ದರು.

Exit mobile version