Kundapra.com ಕುಂದಾಪ್ರ ಡಾಟ್ ಕಾಂ

ಎಸೆಸೆಲ್ಸಿ ಫಲಿತಾಂಶ ಪ್ರಕಟ – ಶೇ.83.89ರಷ್ಟು ಫಲಿತಾಂಶ ದಾಖಲು, ಉಡುಪಿಗೆ 18ನೇ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಶೇ 96.8% ರಷ್ಟು, ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಮಂಡ್ಯ 96.74 ದ್ವಿತೀಯ , ಹಾಸನ ಮೂರನೇ ಸ್ಥಾನದಲ್ಲಿದೆ. ಯಾದಗಿರಿ ಶೇ 75.49 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಇನ್ನು ಉಡುಪಿ 18 ಹಾಗೂ ದ.ಕ 19ನೇ ಸ್ಥಾನದಲ್ಲಿದೆ.

ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್ ಇಎಬಿ ) ಪತ್ರಿಕಾಗೋಷ್ಟಿ ಫಲಿತಾಂಶ ಪ್ರಕಟಿಸಿದೆ.

ಪ್ರತಿಶತ ಅಂಕ ಪಡೆದ ವಿದ್ಯಾರ್ಥಿಗಳು:
ಭೂಮಿಕಾ – ನ್ಯೂ ಮೆಕಾಲೆ ಇಂಗ್ಲಿಷ್ ಹೈಸ್ಕೂಲ್ ಹೊಸೂರು
ಯಶಶ್ ಗೌಡ – ಚಿಕ್ಕಬಳ್ಳಾಪುರ
ಅನುಪಮ ಶ್ರೀ ಶೈಲಿ – ಬೆಳಗಾವಿ
ಬೀಮನ್ ಗೌಡ ಹನುಮಂತ್ ಗೌಡ ಬೀರಾದಾರ್ ಪಾಟೀಲ್ – ಬಿಜಾಪುರ
ಎಸೆಸೆಲ್ಸಿ ಪರೀಕ್ಷೆ 2023 ಮಾರ್ಚ್ 31 ರಂದು ಪ್ರಾರಂಭವಾಗಿದ್ದು, ಏಪ್ರಿಲ್ 15, 2023 ರಂದು ಕೊನೆಗೊಂಡಿತ್ತು.ಈ ಪರೀಕ್ಷೆಗೆ ರಾಜ್ಯದ್ಯಾಂತ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 15,498 ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ವಿದ್ಯಾರ್ಥಿಗಳು ಪಲಿತಾಂಶಕ್ಕಾಗಿ ಅಧಿಕೃತ ವೆಬ್ಸೈಟ್ https://kseab.karnataka.gov.in/ ಅಥವಾ https://karresults.nic.in/ ಪಡೆಯಬಹುದು .

ಕಳೆದ ಬಾರಿ ಅಂದರೆ 2022 ರಲ್ಲಿ, ಒಟ್ಟಾರೆ ಉತ್ತೀರ್ಣ ಶೇಕಡಾ 85.63 ರಷ್ಟು ದಾಖಲಾಗಿತ್ತು.

Exit mobile version