Site icon Kundapra.com ಕುಂದಾಪ್ರ ಡಾಟ್ ಕಾಂ

ಎಸೆಸೆಲ್ಸಿ ಫಲಿತಾಂಶ: ಚಿತ್ತೂರು ಸರಕಾರಿ ಪ್ರೌಢಶಾಲೆ ಶಾಲೆಯ ವಿದ್ಯಾರ್ಥಿನಿ ಚೈತನ್ಯಗೆ 3ನೇ ರ್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಚಿತ್ತೂರು ಸರಕಾರಿ ಪ್ರೌಢಶಾಲೆ ಶಾಲೆಯ ವಿದ್ಯಾರ್ಥಿನಿ ಚೈತನ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ರಲ್ಲಿ 623 ಅಂಕ ಪಡೆದು ರಾಜ್ಯಕ್ಕೇ ತೃತೀಯ ಸ್ಥಾನ ಪಡೆದಿದ್ದಾಳೆ.

ಏಳನೇ ತರಗತಿಯ ತನಕ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿನಿ ಯಾವುದೇ ಟ್ಯೂಷನ್ ತರಬೇತಿ ಇಲ್ಲದೆ ತನ್ನ ಸ್ವಂತ ಪರಿಶ್ರಮದಿಂದ ಸಾಧನೆ ಮಾಡಿದ ಗ್ರಾಮೀಣದ ಭಾಗದ ಪ್ರತಿಭೆ. ಬೆಳ್ಳಾಲ ಗ್ರಾಮದ ನಂದ್ರೋ ಳ್ಳಿ ಸುಧಾಕರ ಆಚಾರ್ಯ ಮತ್ತು ಯಶೋಧ ದಂಪತಿಯ ಪುತ್ರಿ

Exit mobile version