Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ವಿಧಾನಸಭಾ ಕ್ಷೇತ್ರ: 16ನೇ ಸುತ್ತು ಪೂರ್ಣ- ಬಿಜೆಪಿಗೆ ಗೆಲುವು

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ:
ಕುಂದಾಪುರ ವಿಧಾನಸಭಾ ಕ್ಷೇತ್ರದ 16ನೇ ಸುತ್ತಿನ ಮತ ಎಣಿಕೆ ಪೂರ್ಣವಾಗಿದ್ದು ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 40930 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

8ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 62311 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ 38151 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 24160 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಮತಎಣಿಕೆ ಪೂರ್ಣಗೊಳ್ಳುವ ವೇಳೆಗೆ ಬಿಜೆಪಿ ಮತ್ತಷ್ಟು ಲೀಡ್ ಪಡೆದುಕೊಳ್ಳಲಿದೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ 7ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 57326 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ 34249 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 23077 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Exit mobile version