ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವಿಧಾನಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕೊನೆಯ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ 16173 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಗುರುರಾಜ್ ಗಂಟಿಹೊಳೆ 98628 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 82475 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 16173 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
