Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಪಿ.ಎಂ ಕಿಸಾನ್ ಯೋಜನೆ ಸಹಾಯಧನ ಪಡೆಯಲು ಇ-ಕೆವೈಸಿ ಕಡ್ಡಾಯ

ಕುಂದಾಪ್ರ ಡಾಟ್ ಕಾಮ ಸುದ್ದಿ.
ಉಡುಪಿ,ಮೇ20:
ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ ಕಿಸಾನ್ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ.

ಕೃಷಿ ಇಲಾಖೆಯ ವತಿಯಿಂದ ಈಗಾಗಲೇ ಈ ಕುರಿತು ಮಾಹಿತಿ ನೀಡಲಾಗಿದ್ದು, ಇದು ಕೊನೆಯ ಅವಕಾಶವಾಗಿದೆ. ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version