Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರಕಾರಿ ಮಾದರಿ ಪ್ರಾಥಮಿಕ ಶಾಲೆ – ಶಾಲಾ ಪ್ರಾರಂಭೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಬೈಂದೂರು ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಬೈಂದೂರು ಇಲ್ಲಿಯ ಶಾಲಾ ಪ್ರಾರಂಭೋತ್ಸವ ನಡೆಯಿತು.

ಶಾಲೆಗೆ ಬಂದ ಮಕ್ಕಳನ್ನು ಸ್ವಾಗತಿಸಿಕೊಂಡು ಪುಸ್ತಕ ಸಮವಸ್ತ್ರಗಳನ್ನು ನೀಡಲಾಯಿತು ಸಂದರ್ಭದಲ್ಲಿ ಎಸ್ಟಿಎಂಸಿಯ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಜೀವ ದೇವಡಿಗ ಉಪಾಧ್ಯಕ್ಷರಾದ ಸುಮತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು.

ಶಾಲಾ ಪ್ರಾರಂಭೋತ್ಸವದ ತೆಂಕಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಸಿಹಿ ತಿಂಡಿ ನೀಡಿ ಬರಮಾಡಿಕೊಳ್ಳಲಾಯಿತು.

ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ದನ್ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು ಶಿಕ್ಷಕರಾದ ಗಣಪತಿ ಹೋಬಳಿಧಾರ್ ಸರ್ವರನ್ನು ಸ್ವಾಗತಿಸಿದರು.

Exit mobile version