Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಗುರುವಾರ ಭೇಟಿ ನೀಡಿ ಕಾಲೇಜಿನ ಎಲ್ಲಾ ಸೌಲಭ್ಯಗಳನ್ನು ಖುದ್ದು ಪರಿಶೀಲಿಸಿದರು.

ಬಳಿಕ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಕಾಲೇಜಿನ ಅಭಿವೃದ್ಧಿಗಾಗಿ ಚಿಂತಿಸುವ ʼಪರಿವರ್ತನʼ ಎಂಬ ತಂಡವನ್ನು ಸಿದ್ಧಗೊಳಿಸಿಕೊಂಡು ಕಾರ್ಯಯೋಜನೆಯನ್ನು ರೂಪಿಸುವಂತೆ ಹಾಗೂ ಈ ಯೋಜನೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು, ಕಾಲೇಜಿನ ಬಗ್ಗೆ ಕಾಳಜಿಯಳ್ಳ ಜನರನ್ನು ಈ ಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು.

ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು, ಕಾಲೇಜಿನ ನಿಕಟಪೂರ್ವ ಕಾರ್ಯಾಧ್ಯಕ್ಷರಾದ ದೀಪಕಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Exit mobile version